ನಿಗದಿತ ಸಮಯಕ್ಕಿಂತ ಮೊದಲೇ ವಿಧಾನಮಂಡಲ ಕಲಾಪ ಮೊಟಕು

ಬೆಂಗಳೂರು,ಫೆ.22- ಕಾಂಗ್ರೆಸ್ ಶಾಸಕರ ಅಹೋರಾತ್ರಿ ಧರಣಿಯಿಂದಾಗಿ ವಿಧಾನಸಭೆ ಅಧಿವೇಶನ ಪೂರ್ವ ನಿಗದಿತ ಸಮಯಕ್ಕಿಂತ ಮೊದಲೇ ಮುಕ್ತಾಯಗೊಂಡಿತು. ಕಳೆದ ಗುರುವಾರದಿಂದ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಅಥವಾ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಇಂದು ಸಹ ಮುಂದುವರೆಯಿತು. ರಾಷ್ಟ್ರಧ್ವಜಕ್ಕೆ ಸಚಿವ ಈಶ್ವರಪ್ಪ ಅವರು ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಸಂಪುಟದಿಂದ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ವಿಧಾನಸಭೆಯಲ್ಲಿ ನಿರಂತರವಾಗಿ ಧರಣಿ ಮಾಡುತ್ತಿದೆ. ಇಂದು ಬೆಳಗ್ಗೆಯೂ ಸದನ ಅರಂಭಗೊಂಡಾಗ ಕಾಂಗ್ರೆಸ್ ಸದಸ್ಯರು ಸಭಾಧ್ಯಕ್ಷರ […]