ಲಿಂಗ ಸಮಾನತೆ ರೂಪಿಸುವಲ್ಲಿ ನಮ್ಮ-ನಿಮ್ಮೆಲ್ಲರ ಪ್ರಮುಖ ಪಾತ್ರವಿದೆ : ಕಾಗೇರಿ

ಬೆಂಗಳೂರು, ಮಾ.8- ಲಿಂಗ ಸಮಾನತೆ ರೂಪಿಸುವಲ್ಲಿ ನಮ್ಮ-ನಿಮ್ಮೆಲ್ಲರ ಪ್ರಮುಖ ಪಾತ್ರವಿದೆ ಎಂಬುದನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿದರು. ಅಪ್ರತಿಮ ಸಾಧನೆಗೈದ ನಾಡಿನ ಎಲ್ಲಾ ಮಹಿಳಾ ಸಾಧಕಿಯರಿಗೆ, ಸದನದ ಎಲ್ಲಾ ಮಹಿಳಾ ಸದಸ್ಯರಿಗೆ ಹಾಗೂ ನಾಡಿನ ಎಲ್ಲಾ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಸದನದ ಮೂಲಕ ಕೋರಿದರು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡ ಕೂಡಲೇ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ ಅವರು, ವಿಶ್ವಸಂಸ್ಥೆಯು 2022ನೇ ಸಾಲಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸುಸ್ಥಿರ […]