ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ; ADGP ಪ್ರತಾಪ್‍ರೆಡ್ಡಿ

ಬೆಂಗಳೂರು,ಫೆ.22- ಶಿವಮೊಗ್ಗದಲ್ಲಿ ಇಂದು ಮುಂಜಾನೆ ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಪ್ರತಾಪ್‍ರೆಡ್ಡಿ ತಿಳಿಸಿದರು. ಶಿವಮೊಗ್ಗದಲ್ಲಿ ಮೊಕ್ಕಾಂ ಹೂಡಿರುವ ಅವರು, ಈ ಸಂಜೆ ಯೊಂದಿಗೆ ಮಾತನಾಡಿ, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು. ಒಂದು ಕಂಪೆನಿ ಆರ್‍ಎಎಫ್, ಕೆಎಸ್‍ಆರ್‍ಪಿ ತುಕಡಿಗಳು ಸೇರಿದಂತೆ ಬೆಂಗಳೂರು ನಗರ ಮತ್ತು ರಾಜ್ಯದ ವಿವಿಧ ಜಿಲ್ಲೆಗಳಿಂದ ಪೊಲೀಸ್ ಅಕಾರಿಗಳು ಮತ್ತು ಸಿಬ್ಬಂದಿಗಳನ್ನು ಶಿವಮೊಗ್ಗದಲ್ಲಿ ಬಂದೋಬಸ್ತ್‍ಗೆ ನಿಯೋಜಿಸಿ […]