ನಾಳೆ ಜೆಡಿಎಸ್ ಶಾಸಕಾಂಗ ಸಭೆ

ಬೆಂಗಳೂರು,ಮಾ.3- ರಾಜ್ಯ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಯಲಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲಾ ಶಾಸಕರು ಪಾಲ್ಗೊಳ್ಳಲಿದ್ದಾರೆ. ಸಭೆಗೆ ಹಾಜರಾಗುವಂತೆ ಪಕ್ಷದ ಸಚೇತಕರಾದ ವೆಂಕಟರಾವ್ ನಾಡಗೌಡ ಅವರು ಶಾಸಕರಿಗೆ ಪತ್ರ ಬರೆದಿದ್ದಾರೆ. ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಯಾವ ವಿಚಾರಗಳಿಗೆ ಆದ್ಯತೆ ನೀಡಿ ಪ್ರಸ್ತಾಪಿಸಬೇಕು, ಇತ್ತೀಚಿನ ರಾಜಕೀಯ ವಿದ್ಯಮಾನಗಳು, […]

ಬೊಮ್ಮಾಯಿ ‘ಸ್ಮಾರ್ಟ್’ ಬಜೆಟ್‍ನಲ್ಲಿ ಡಿಜಿಟಲ್ ಸೇವೆಗೆ ಹೆಚ್ಚು ಒತ್ತು ಸಾಧ್ಯತೆ

ಬೆಂಗಳೂರು,ಮಾ.1- ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ 2022- 2 ನೇ ಸಾಲಿನ ರಾಜ್ಯ ಬಜೆಟ್‍ನಲ್ಲಿ ಗುಡ್ ಗೌವರ್ನಮೆಂಟ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತು ನೀಡಿದ್ದು, ಮಾ.4ಕ್ಕೆ ಮಂಡನೆಯಾಗಲಿರುವ ಆಯವ್ಯಯದಲ್ಲಿ ಡಿಜಿಟಲ್ ಸೇವೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿದು ಬಂದಿದೆ. ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಬೇಕಿದೆ. ಹೀಗಾಗಿ ಆಡಳಿತ ನೀತಿಗೆ ಶರವೇಗ ನೀಡಲು ಮತ್ತು ಸರ್ಕಾರಿ ಸೇವೆಯನ್ನು ಜನರ ಮನೆ […]