ರಾಜ್ಯದ ಪ್ರಗತಿಗೆ ಪೂರಕವಾದ ನ್ಯಾಯಯುತ ಬಜೆಟ್ ಮಂಡಿಸುತ್ತೇವೆ : ಬೊಮ್ಮಾಯಿ

ಬೆಂಗಳೂರು,ಫೆ.22- ಮುಂಬರುವ ಬಜೆಟ್‍ನಲ್ಲಿ ರಾಜ್ಯದ ಪ್ರಗತಿಗೆ ಪೂರಕವಾದ ಹಾಗೂ ಎಲ್ಲ ವರ್ಗದವರಿಗೆ ನ್ಯಾಯ ಒದಗಿಸುವ, ರಾಜ್ಯದ ಅಭಿವೃದ್ಧಿಯನ್ನು ಬಿಂಬಿ ಸುವ ಮುನ್ನೋಟದ ಬಜೆಟ್‍ನ್ನು ಮಂಡಿಸಲಿದ್ದೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿಂದು ಘೋಷಿಸಿದರು. ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ಪ್ರಸ್ತಾವದ ಮೇಲೆ ಮಾತನಾಡಿದ ಬೊಮ್ಮಾಯಿ ಅವರು, ಕೋವಿಡ್, ಪ್ರವಾಹದಂತಹ ಸಂಕಷ್ಟದ ಸ್ಥಿತಿಯಲ್ಲೂ ರಾಜ್ಯದ ಅಭಿವೃದ್ಧಿಗೆ ಎಲ್ಲಿಯೂ ಹಿನ್ನಡೆಯಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಆಡಳಿತ ಸುಧಾರಣೆಗೆ ಎರಡು ವರದಿಗಳನ್ನು ತೆಗೆದುಕೊಂಡಿದ್ದೇವೆ. ಉದ್ಯೋಗ ನೀತಿ, ಸೆಮಿಕಂಡಕ್ಟರ್ ನೀತಿಯಂತಹ […]