ದೆಹಲಿಯಲ್ಲಿ ನಾಳೆ ಕಾಂಗ್ರೆಸ್ ನಿಯೋಗದ ಸಭೆ ; ಮಹತ್ವದ ತೀರ್ಮಾನಗಳ ನಿರೀಕ್ಷೆ

ಬೆಂಗಳೂರು, ಫೆ.23- ವಿಧಾನಸಭೆ ಚುನಾವಣೆ, ಕಾಂಗ್ರೆಸ್ ಪದಾಧಿಕಾರಿಗಳ ನೇಮಕ, ಕೇಂದ್ರಿಯ ತನಿಖಾ ಸಂಸ್ಥೆಗಳ ದುರುಪಯೋಗದ ಮುನ್ಸೂಚನೆ, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ಹಾಗೂ ಮತೀಯ ಶಕ್ತಿಗಳ ಹಿಂಸಾಚಾರ ಕುರಿತು ದೆಹಲಿಯಲ್ಲಿ ನಾಳೆ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆಯಲಿದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ನಾಯಕರು ನಾಳೆ ಬೆಳಗ್ಗೆ 9.30ಕ್ಕೆ ದೆಹಲಿಗೆ ತೆರಳಲಿದ್ದು, ಸಂಜೆ 4.30ಕ್ಕೆ ಸಭೆ ನಡೆಯಲಿದೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ […]