ಪ್ರವಾಸಿ ತಾಣಗಳಾಗಲಿವೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ರಾಜ್ಯದ ಸ್ಥಳಗಳ
ಬೆಂಗಳೂರು, ಜ.27- ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಮಹತ್ವ ಸಾರಲು ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆಯು ಹೋರಾಟದಲ್ಲಿ ಕೊಡುಗೆ ನೀಡಿದ ರಾಜ್ಯದ ಸ್ಥಳಗಳನ್ನು ಪ್ರವಾಸಿ ತಾಣವಾಗಿ ಮಾಡಲು ಸರ್ಕಾರ ಮುಂದಾಗಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭ ದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಸ್ಥಳಗಳ ಕುರಿತು ಮಾಹಿತಿ ಕಲೆ ಹಾಕುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯದಲ್ಲಿ ಸಾರ್ವಜನಿಕ ಸಹಭಾಗಿತ್ವ ಕೋರಲಾಗುತ್ತಿದ್ದು, ಜನರು ತಮಗೆ ತಿಳಿದ ಸ್ಥಳಗಳ ಕುರಿತ ಮಾಹಿತಿಗಳನ್ನು ಇಲಾಖೆಯೊಂದಿಗೆ ಹಂಚಿಕೊಳ್ಳಬಹುದಾಗಿದೆ ಎಂದು ಪ್ರವಾ […]