ರಾಜ್ಯದಲ್ಲಿ ಕೋವಿಡ್ ನಿರ್ಬಂಧ ಸಂಪೂರ್ಣ ತೆರವು

ಬೆಂಗಳೂರು :  ಕೊರೊನಾ ಸೋಂಕು ಭಾರೀ ಪ್ರಮಾಣದಲ್ಲಿ ಇಳಿಮುಖವಾದ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಜನಜೀವನ ಹಾಗೂ ಆರ್ಥಿಕತೆಗೆ ಮತ್ತೆ ಚೇತರಿಕೆ ಒದಗಿಸಲು ಶಿಕ್ಷಣ, ಸಾಂಸ್ಕøತಿಕ, ಸಭೆ- ಸಮಾರಂಭಗಳು, ಕ್ರೀಡೆ, ಮನರಂಜನಾ ಚಟುವಟಿಕೆಗಳು, ಜಾತ್ರೆ, ಉತ್ಸವಗಳು ಸೇರಿದಂತೆ ವಿವಿಧ ರಂಗಗಳ ಮೇಲೆ ವಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಮದುವೆ, ಶವ ಸಂಸ್ಕಾರಗಳಲ್ಲಿ ಭಾಗವಹಿಸುವವರ ಸಂಖ್ಯೆಗೆ ಮಿತಿಗೊಳಿಸಲಾಗಿದ್ದ ನಿರ್ಬಂಧಗಳನ್ನು ಕೂಡ ಮುಕ್ತಗೊಳಿಸಲಾಗಿದೆ. ಸಿನಿಮಾ, ನಾಟಕ, ಥಿಯೇಟರ್‍ಗಳು, ಶಾಲೆ, ಕಾಲೇಜು, […]