ಹೈಕೋರ್ಟ್ ಆದೇಶಕ್ಕೆ ಡೋಂಟ್ ಕೇರ್, ಮುಂದುವರೆದ ಹಿಜಾಬ್ ಹಠ

ಬೆಂಗಳೂರು, ಫೆ.18- ಹೈಕೋರ್ಟ್ ಆದೇಶ ಪಾಲಿಸಿ ಸಮವಸ್ತ್ರ ಸಂಹಿತೆಯನ್ನು ಅನುಸರಿಸಿ ಶಾಲಾ-ಕಾಲೇಜುಗಳು ನಡೆಯುವಂತೆ ಅನುವು ಮಾಡಿಕೊಡಿ ಎಂದು ಪೊಲೀಸರು, ಜಿಲ್ಲಾಡಳಿತ, ಕಾಲೇಜು ಆಡಳಿತ ಮಂಡಳಿ ಸಾಕಷ್ಟು ಮನವಿ ಮಾಡಿದರೂ ಹಿಜಾಬ್‍ಗಾಗಿ ಪಟ್ಟುಬಿಡದ ವಿದ್ಯಾರ್ಥಿಗಳು ಇಂದೂ ಕೂಡ ವಿವಿಧೆಡೆ ಪ್ರತಿಭಟನೆ ನಡೆಸಿದರು. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ವಿಚಾರಣೆ ಕೂಡ ನಡೆಯುತ್ತಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲದಿದ್ದರೂ ವಿದ್ಯಾರ್ಥಿಗಳು ಪ್ರತಿನಿತ್ಯ ಹಿಜಾಬ್ ಧರಿಸಿ ಬರುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. […]

ಹಿಜಾಬ್ ಬ್ರೇಕಿಂಗ್ : ಶಾಲೆಗಳಲ್ಲಿ ಧಾರ್ಮಿಕ ಗುರುತುಗಳನ್ನು ಬಳಸದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು : ಅಂತಿಮ ತೀರ್ಪು ಬರುವವರೆಗೂ ಯಾವುದೇ ರೀತಿಯ ಧಾರ್ಮಿಕ ಗುರುತುಗಳನ್ನು ಬಳಸಿಕೊಂಡು ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳು ಪ್ರವೇಶಿಸದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರ ನೇತೃತ್ವದ ತ್ರಿಸದಸ್ಯ ಪೀಠ ಸುದೀರ್ಘ ವಾದವನ್ನು ಆಲಿಸಿದ ನಂತರ ರಾಜ್ಯದಲ್ಲಿ ಶಾಂತಿ, ನೆಮ್ಮದಿ ಕಾಪಾಡುವುದು ಮುಖ್ಯವಾಗಿದೆ. ಶಿಕ್ಷಣ ಸಂಸ್ಥೆಗಳು ಆರಂಭಗೊಂಡನಂತರ ಯಾವುದೇ ರೀತಿಯ ಧಾರ್ಮಿಕ ಸಂಕೇತವನ್ನು ಸೂಚಿಸುವ ಉಡುಪುಗಳನ್ನು ಬಳಸುವಂತಿಲ್ಲ ಎಂದು ಹೇಳುವ ಮೂಲಕ ಹಿಜಾಬ್ ವಿವಾದಕ್ಕೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ […]