ರಾಜ್ಯಾದ್ಯಂತ ಪೊಲೀಸರು ಹೈ ಅಲರ್ಟ್, ಶಾಲೆಗಳಿಗೆ ಭದ್ರತೆ

ಬೆಂಗಳೂರು,ಫೆ.13- ನಾಳೆಯಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಬಿಗಿಭದ್ರತೆ ಕಲ್ಪಿಸಿ ಹೈ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಗೃಹ ಸಚಿವ ಅರಗ ಜ್ಞಾನೇಂದ್ರ ಎಲ್ಲ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಶಾಲಾ ಆವರಣದಲ್ಲಿ ಯಾವುದೇ ರೀತಿಯ ಕಾನೂನು ಸುವ್ಯವಸ್ಥೆ ಭಂಗವಾಗದಂತೆ ಮತ್ತು ವಿವಾದಗಳು ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ವಿಶೇಷವಾಗಿ ಪೊಲೀಸರ ಜೊತೆ ಶಸ್ತ್ರಸ್ತ್ರ ಮೀಸಲು ಪಡೆಯನ್ನು ನಿಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಹೆಚ್ಚಿನ […]