ಕುಂಕುಮ-ಹಿಜಾಬ್ ಎರಡಕ್ಕೂ ಅಡ್ಡಿ ಪಡಿಸಬಾರದು : ಸಿದ್ದರಾಮಯ್ಯ
ಬೆಂಗಳೂರು, ಫೆ.20- ಸಿಂಧೂರ ಆಗಲಿ-ಹಿಜಾಬ್ ಆಗಲಿ ಎರಡು ನಮ್ಮ ನಮ್ಮ ಸಂಸ್ಕøತಿ ಮತ್ತು ನಂಬಿಕೆ. ಕುಂಕುಮ ಇಡುವುದರಿಂದ-ಹಿಜಾಬ್ ಹಾಕುವುದರಿಂದ ಯಾರಿಗೂ ತೊಂದರೆ ಇಲ್ಲ. ಯಾವುದೇ ಸಂಸ್ಕøತಿಯನ್ನು ಬಲವಂತದಿಂದ ತಡೆಯುವುದು ತಪ್ಪು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಧೂರ ಇಡುವುದರಿಂದ ಯಾರಿಗೂ ತೊಂದರೆ ಇಲ್ಲ. ಹಾಗೆಯೇ ಹಿಜಾಬ್ ಧರಿಸುವುದರಿಂದಲೂ ಯಾರಿಗೂ ತೊಂದರೆ ಇಲ್ಲ. ಹಿಂದಿನಿಂದ ನಡೆದುಕೊಂಡು ಬಂದಿರುವ ನಂಬಿಕೆ, ಆಚರಣೆ, ಪರಂಪರೆಗೆ ತಕ್ಕಂತೆ ನಡೆದುಕೊಳ್ಳುವುದರಿಂದ ಯಾರಿಗೂ ತೊಂದರೆ ಇಲ್ಲ […]