“ಲೋಕಾಯುಕ್ತಕ್ಕೆ ಮೊದಲಿನಂತೆ ಹೆಚ್ಚಿನ ಅಧಿಕಾರ ನೀಡಿ”

ಬೆಂಗಳೂರು,ಜ.24- ಜನರ ಹಿತದೃಷ್ಟಿಯಿಂದ ರಾಜ್ಯ ಲೋಕಾಯುಕ್ತಕ್ಕೆ ಮೊದಲಿನಂತೆ ಹೆಚ್ಚಿನ ಅಧಿಕಾರ ಬೇಕು ಎಂದು ಲೋಕಾಯುಕ್ತ ನ್ಯಾ.ವಿ.ವಿಶ್ವನಾಥ್ ಶೆಟ್ಟಿ ತಿಳಿಸಿದರು. ಜ.27ರಂದು ಲೋಕಾಯುಕ್ತ ಸ್ಥಾನದಿಂದ ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರವಿದ್ದಾಗ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿರುವ ನೌಕರರಿಗೆ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ ಎಂದರು. ಭ್ರಷ್ಟಾಚಾರ ನಿಗ್ರಹ ದಳವೂ ಸರ್ಕಾರದ ಅೀಧಿನಕ್ಕಿಂತ ಸ್ವಾಯತ್ತ ಸಂಸ್ಥೆಯಾದ ಲೋಕಾಯುಕ್ತ ಅಧಿಕಾರಕ್ಕೆ ಒಳಪಟ್ಟರೆ ಸೂಕ್ತ ಎಂದರು. ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಪ್ರಕರಣಗಳ ತ್ವರಿತ ಇತ್ಯರ್ಥ ಮತ್ತು ದಕ್ಷತೆಯಿಂದ ಕೆಲಸ ಮಾಡಲು ಪ್ರಯತ್ನಿಸಿರುವ […]