ಡಿ.19ರಿಂದ ಚಳಿಗಾಲದ ಅಧಿವೇಶನ, ಸರ್ಕಾರದ ಎಚ್ಚರಿಕೆಯ ಹೆಜ್ಜೆ

ಬೆಂಗಳೂರು,ಡಿ.2- ಡಿಸೆಂಬರ್ 19ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆ ಈ ಬಾರಿಯ ಅಧಿವೇಶನದಲ್ಲಿ ಕಾವೇರಿದ ವಾತಾವರಣ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕಳೆದ ಬಾರಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆದಿತ್ತು. ಆದರೆ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ ಪುಂಡಾಟಿಕೆ ನಡೆಸಿತ್ತು. ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆಗೆ ಹಾನಿ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ವಿಚಾರವಾಗಿ ವಿಧಾನಸಭೆಯಲ್ಲಿ ದೊಡ್ಡಮಟ್ಟದ ಚರ್ಚೆಗೆ […]