ಕಂಪ್ಲೀಟ್ ಲಾಕ್‍ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸಚಿವ ಕೆ.ಸುಧಾಕರ್

ಬೆಂಗಳೂರು,ಜ.7- ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಜನ ಸಾಮಾನ್ಯರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಸದ್ಯಕ್ಕೆ ಲಾಕ್‍ಡೌನ್ ಮಾಡುವ ಚಿಂತನೆಯಲ್ಲಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಲ್ಲ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಒಂದು ಕಡೆ ಇಂದಿನಿಂದ ರಾಜ್ಯಾದ್ಯಂತ ವೀಕೆಂಡ್ ಕಫ್ರ್ಯೂ ಜಾರಿಯಾಗುತ್ತಿರುವ ಸಂದರ್ಭದಲ್ಲೇ ಲಾಕ್‍ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುವುದನ್ನು ಯಾರೂ ತಡೆಗಟ್ಟಲು ಸಾಧ್ಯವಿಲ್ಲ. ನಾವು […]