ಕರ್ನಾಟಕ ರತ್ನ ಮೂಲಕವೂ ಹಲವು ದಾಖಲೆ ಬರೆಯಲಿದ್ದಾರೆ ಅಪ್ಪು

ಬೆಂಗಳೂರು,ಅ.31- ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಸ್ಯಾಂಡಲ್ ವುಡ್‍ನ ಪ್ರತಿಭಾವಂತ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ನಾಳೆ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ನೀಡಲಿದೆ. ಈ ಮೂಲಕ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಮೊದಲ ಚಿತ್ರನಟ ಎಂಬ ಹೆಗ್ಗಳಿಕೆಗೆ ಪುನೀತ್ ರಾಜ್‍ಕುಮಾರ್ ಪಾತ್ರರಾಗಲಿದ್ದಾರೆ.ಈವರೆಗೂ ಎಂಟು ಮಂದಿಗೆ ಕರ್ನಾಟಕ ರತ್ನ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿತ್ತು. ಆದರೆ ಇದು ಜೀವಿತಾವಯಲ್ಲೇ ಈ ಪ್ರಶಸ್ತಿ ಲಭಿಸಿತ್ತು. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ. ನಾಳೆ […]

ಕನ್ನಡ ರಾಜ್ಯೋತ್ಸವದಂದು ಅಪ್ಪುಗೆ ಕರ್ನಾಟಕ ರತ್ನ ಪ್ರದಾನ

ಬೆಂಗಳೂರು,ಅ.20- ಅತ್ಯಲ್ಪ ಕಾಲದಲ್ಲಿ ಕನ್ನಡಿಗರ ಹೃದಯ ಗೆದ್ದು ಎಲ್ಲೆಡೆ ಮನೆ ಮಾತಾಗಿ ಅಷ್ಟೇ ಬೇಗನೆ ಕಣ್ಮರೆಯಾದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಕನ್ನಡ ರಾಜ್ಯೋತ್ಸವ ದಿನದಂದು ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ನಾಡು-ನುಡಿ-ಭಾಷೆ-ಇತಿಹಾಸ-ಸಾಹಿತ್ಯ-ಚಿತ್ರರಂಗ- ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ಮಹನೀಯರಿಗೆ ಮಾತ್ರ ಈ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.ಈವರೆಗೂ ರಾಷ್ಟ್ರಕವಿ ಕುವೆಂಪು, ವರನಟ ಡಾ.ರಾಜ್‍ಕುಮಾರ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಸುಮಾರು ಎರಡು ದಶಕಗಳ […]

BIG NEWS: ರಾಜ್ಯೋತ್ಸವದಂದು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ, ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು,ಆ.5-ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಅಕೃತ ಘೋಷಣೆ ಮಾಡಿದರು. ಲಾಲ್‍ಬಾಗ್‍ನಲ್ಲಿಂದು ಆರಂಭವಾದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿಮಾನಿಗಳ ಒತ್ತಾಸೆಯಂತೆ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನಮ್ಮ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ […]