ಇಂದಿನಿಂದ ಶಾಲೆಗಳು ಆರಂಭ, ಮುಂದುವರೆದ ಹಿಜಾಬ್ ಹಠ

ಬೆಂಗಳೂರು,ಫೆ.14- ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದ ಕಳೆದ ನಾಲ್ಕು ದಿನಗಳಿಂದ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಆರಂಭವಾದವು. ಪೊಲೀಸ್ ಬಿಗಿ ಭದ್ರತೆಯಲ್ಲಿ 9 ಮತ್ತು 10ನೆ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಎಂದಿನಂತೆ ಶಾಲೆಗೆ ಆಗಮಿಸಿದರು. ಸಮವಸ್ತ್ರ ಕಡ್ಡಾಯ ಮಾಡಿಯೇ ಶಾಲೆಗಳನ್ನು ಆರಂಭಿಸಬೇಕು. ಯಾವುದೇ ಕಾರಣಕ್ಕೂ ಶಾಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಶಾಲೆಗಳ ಆವರಣದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಯಿತು. ಯಾವುದೇ ಧಾರ್ಮಿಕ ಸಂಕೇತಗಳನ್ನು ಧರಿಸಿ ಶಾಲೆಗೆ ಬರುವಂತಿಲ್ಲ ಎಂದು ಹೈಕೋರ್ಟ್ […]