2022ನೇ ಸಾಲಿನ ಕರ್ನಾಟಕ ಸ್ಟ್ಯಾಂಪ್ ( 2ನೇ ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಬೆಂಗಳೂರು,ಫೆ.21-ರಾಜ್ಯದಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ನೋಂದಣಿ ಶುಲ್ಕ 25 ಕೋಟಿಗೆ ಸೀಮಿತಗೊಳಿಸುವ 2022ನೇ ಸಾಲಿನ ಕರ್ನಾಟಕ ಸ್ಟ್ಯಾಂಪ್ (2ನೇ ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಇಂದು ಅಂಗೀಕರಿಸಲಾಯಿತು. ಇನ್ನು ಮುಂದೆ ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಹೊರ ರಾಜ್ಯಗಳಿಂದ ಬರುವ ಕೈಗಾರಿಕೋದ್ಯಮಿಗಳಿಗೆ ನೋಂದಣಿ ಶುಲ್ಕದ ಮೊತ್ತವನ್ನು 25 ಕೋಟಿಗಿಂತ ಹೆಚ್ಚು ವಿಸುವುದನ್ನು ನಿಯಂತ್ರಿಸುವುದೇ ಈ ವಿಧೇಯಕದ ಮುಖ್ಯ ಉದ್ದೇಶವಾಗಿದೆ. ವಿಧೇಯಕದ ಮೇಲೆ ಮಾತನಾಡಿದ ಕಂದಾಯ ಸಚಿವ ಅಶೋಕ್, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಬರುವ ಹೊರರಾಜ್ಯಗಳ […]