ಉಕ್ರೇನ್‍ನಿಂದ ರಾಜ್ಯಕ್ಕೆ ಮರಳಿದ ಒಟ್ಟು 263 ವಿದ್ಯಾರ್ಥಿಗಳು

ಬೆಂಗಳೂರು, ಮಾ.4- ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರುವ ಪ್ರಯತ್ನ ತೀವ್ರಗೊಂಡಿದ್ದು, ಒಟ್ಟು 263 ಮಂದಿ ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ. ಫೆ.27 ರಿಂದ ನಿನ್ನೆ ಮಧ್ಯರಾತ್ರಿವರೆಗೆ ರಾಜ್ಯಕ್ಕೆ 190 ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿದ್ದು, ಇಂದು 73 ಮಂದಿ ಹಿಂದಿರುಗಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಹಾಗೂ ನೋಡಲ್ ಅಧಿಕಾರಿ ಡಾ.ಮನೋಜ್ ರಾಜನ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಹೆಸರಿನಲ್ಲಿ ಉಕ್ರೇನ್‍ನಲ್ಲಿ ಸಿಲುಕಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಿಮಾನಗಳ ಮೂಲಕ ಕರೆತರುತ್ತಿದ್ದು, […]