ಉಕ್ರೇನ್‍ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವ ಗೋಪಾಲಯ್ಯ

ಬೆಂಗಳೂರು,ಮಾ.1- ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳ ಜೊತೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ದೂರವಾಣಿ ಕರೆ ಮಾಡಿ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಧೈರ್ಯ ತುಂಬಿದರು. ವಿಡಿಯೋ ಕರೆ ಮಾಡಿದ ಗೋಪಾಲಯ್ಯ ಅವರು, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ರೋಹಿತ್, ಬೆಂಗಳೂರಿನ ರಕ್ಷಿತ್, ಹಾಸನ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳ ಜೊತೆ ಯೋಗಕ್ಷೇಮ ವಿಚಾರಿಸಿ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಮಾಡಿದರು. ಪ್ರಧಾನಿ ನರೇಂದ್ರಮೋದಿ , ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ಸಂಸದೀಯ ವ್ಯವಹಾರಗಳ […]