ವಿಶ್ವವಿದ್ಯಾಲಯದಂತೆ ‘ಈ ಸಂಜೆ’ ಪತ್ರಿಕೆ ಕೆಲಸ ಮಾಡುತ್ತಿದೆ : ದಿನೇಶ್

ಬೆಂಗಳೂರು,ಜ.11- ಈ ಸಂಜೆ ಪತ್ರಿಕೆ ವಿಶ್ವವಿದ್ಯಾಲಯದ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಚ್.ಬಿ.ದಿನೇಶ್ ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸಂಜೆ ಪತ್ರಿಕೆಯು ಬಹಳಷ್ಟು ಪತ್ರಕರ್ತರನ್ನು ಹುಟ್ಟು ಹಾಕಿದೆ. ಈ ಸಂಜೆಯಲ್ಲಿ ತರಬೇತಿ ಪಡೆದ ಪತ್ರಕರ್ತರು ಹೆಸರಾಂತ ಪತ್ರಿಕೆ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ […]