ವಿಧಾನಸಭೆಯಲ್ಲಿ ಜೆಡಿಎಸ್ – ಕಾಂಗ್ರೆಸ್ ಶಾಸಕರ ಜಟಾಪಟಿ

ಬೆಂಗಳೂರು,ಮಾ.9-ಜೆಡಿಎಸ್‍ನ್ನು ರಾಷ್ಟ್ರೀಯ ಪಕ್ಷದ ಬಿ ಟೀಮ್ ಎಂದು ಟೀಕಿಸಿದ ವಿಚಾರ ವಿಧಾನಸಭೆಯಲ್ಲಿಂದು ಪ್ರಸ್ತಾಪವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದ ಘಟನೆ ನಡೆಯಿತು. 2022-23ನೇ ಸಾಲಿನ ಆಯವ್ಯಯ ಅಂದಾಜು ಮೇಲಿನ ಚರ್ಚೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾತನಾಡುತ್ತಿದ್ದಾಗ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರ ನಡುವೆ ಪದೇ ಪದೇ ಮಾತಿನ ಚಕಮಕಿ ಹಾಗೂ ವಾಗ್ವಾದ ನಡೆಯಿತು. ಆಡಳಿತಾರೂಢ ಬಿಜೆಪಿ ಶಾಸಕರು ಜೆಡಿಎಸ್ ಪರವಾಗಿ ನಿಂತರು. ಕುಮಾರಸ್ವಾಮಿ ಮಾತನಾಡುತ್ತಾ, ನಮ್ಮನ್ನು ರಾಷ್ಟ್ರೀಯ […]

ಹಾಜರಿರಬೇಕಾದ ಸಚಿವರೇ ಸದನದಲ್ಲಿಲ್ಲ : ಸಭಾಧ್ಯಕ್ಷರು ಅಸಮಾಧಾನ

ಬೆಂಗಳೂರು,ಮಾ.9- ಕಡ್ಡಾಯವಾಗಿ ಹಾಜರಿರಬೇಕಾದ ಸಚಿವರು ಸದನದಲ್ಲಿ ಇಲ್ಲದಿರುವ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ರಾಜೇಗೌಡ ಅವರ ಪ್ರಶ್ನೆಗೆ ರೇಷ್ಮೆ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಉತ್ತರಿಸಬೇಕಾಗಿತ್ತು. ಆ ಸಂದರ್ಭದಲ್ಲಿ ಅವರು ಸದನದಲ್ಲಿ ಹಾಜರಿರಲಿಲ್ಲ. ಆಗ ಅಸಮಾಧಾನಗೊಂಡ ಸಭಾಧ್ಯಕ್ಷರು ಪ್ರಶ್ನೋತ್ತರ ಕಲಾಪದಲ್ಲಿ ಸಂಬಂಧಿಸಿದ ಸಚಿವರು ಕಡ್ಡಾಯವಾಗಿ ಹಾಜರಿರಬೇಕು. ಬಂದರೂ ಆಯಿತು, ಬಾರದಿದ್ದರೂ ಆಯಿತು ಎಂಬ ಮನಸ್ಥಿತಿ ಸರಿಯಲ್ಲ ಎಂದರು. ಕಡ್ಡಾಯವಾಗಿ ಹಾಜರಿರಬೇಕಿರುವ ಸಚಿವರಾದ ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಸಿ.ಸಿ.ಪಾಟೀಲ್, […]

“ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ಸೀಟು ಮೀಸಲಾತಿಯಲ್ಲಿ ರಾಜಿಯಿಲ್ಲ’

ಬೆಂಗಳೂರು,ಮಾ.8- ಕಲ್ಯಾಣ ಕರ್ನಾಟಕ ಭಾಗದ 371(ಜೆ) ಅಡಿಯಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶಕ್ಕೆ ಆದೇಶ ಮಾಡಲಾಗಿದ್ದು ಸರ್ಕಾರ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಶೂನ್ಯವೇಳೆಯಲ್ಲಿ ಶಾಸಕ ಶಿವರಾಜ್ ಪಾಟೀಲ್ ಮತ್ತಿತರರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಸಚಿವರು, ಮೀಸಲಾತಿ ಅನ್ವಯ ದಾಖಲಾತಿಗೆ ಆದೇಶ ಮಾಡಲಾಗಿದ್ದು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ನವೋದಯ ಮೆಡಿಕಲ್ ಕಾಲೇಜು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದೆ. ಆದರೂ ಆ ಪ್ರವೇಶದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಇಂದು ತಡೆಯಾಜ್ಞೆ ಸಂಬಂಧ […]

ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆ ನಿರ್ಮಿಸಲು ತೀರ್ಮಾನ

ಬೆಂಗಳೂರು,ಮಾ.8-ರಾಜ್ಯದಲ್ಲಿ ಹೊಸ 100 ಪೊಲೀಸ್ ಠಾಣೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ವಿಧಾನಸಭೆಗೆ ಇಂದು ತಿಳಿಸಿದರು.  ಶಾಸಕ ಬಿ.ಕೆ.ಸಂಗಮೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ. ಶಿಥಿಲಾವಸ್ಥೆಯಲ್ಲಿರುವ ಠಾಣೆಗಳನ್ನು ಸಹ ಆಧುನೀಕರಣಗೊಳಿಸುವುದಾಗಿ ತಿಳಿಸಿದರು. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಒಟ್ಟು 6 ಪೊಲೀಸ್ ಠಾಣೆಗಳಲ್ಲಿವೆ. ಇದರಲ್ಲಿ 1 ಗ್ರಾಮಾಂತರ ಮತ್ತು 1 ಸಂಚಾರಿ ಪೊಲೀಸ್ ಠಾಣೆ ಮತ್ತು ಪೇಪರ್‍ಟೌನ್ ಠಾಣೆಗಳು ಶಿಥಿಲಾವಸ್ಥೆಯಲ್ಲಿವೆ. ಹೊಸದಾಗಿ […]

ಅಲ್ಪಸಂಖ್ಯಾತರ ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾರ್ಪಡು ಮಾಡಲಾಗುವುದು : ಸಿಎಂ

ಬೆಂಗಳೂರು,ಮಾ.8- ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ವತಿಯಿಂದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಹೊಸದಾಗಿ ಮಾರ್ಪಡು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. ಶಾಸಕ ಪ್ರಿಯಾಂಕ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶೀಘ್ರದಲ್ಲೇ ಅಕಾರಿಗಳ ಸಭೆ ಕರೆದು ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹಾಲಿ ಇರುವ ನಿಯಮಗಳಿಗೆ ತಿದ್ದುಪಡಿ ಮಾಡಲಾಗುವುದು. ಈವರೆಗೂ ಇದನ್ನು ವೃತ್ತಿಪರ ಕೋರ್ಸ್‍ಗಳಿಗೆ ಮಾತ್ರ ನೀಡಲಾಗುತ್ತಿತ್ತು. ಈಗ ಇದನ್ನು ಮಾರ್ಪಾಡು ಮಾಡಿದರೆ ಪದವಿ […]

ಲಿಂಗ ಸಮಾನತೆ ರೂಪಿಸುವಲ್ಲಿ ನಮ್ಮ-ನಿಮ್ಮೆಲ್ಲರ ಪ್ರಮುಖ ಪಾತ್ರವಿದೆ : ಕಾಗೇರಿ

ಬೆಂಗಳೂರು, ಮಾ.8- ಲಿಂಗ ಸಮಾನತೆ ರೂಪಿಸುವಲ್ಲಿ ನಮ್ಮ-ನಿಮ್ಮೆಲ್ಲರ ಪ್ರಮುಖ ಪಾತ್ರವಿದೆ ಎಂಬುದನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿದರು. ಅಪ್ರತಿಮ ಸಾಧನೆಗೈದ ನಾಡಿನ ಎಲ್ಲಾ ಮಹಿಳಾ ಸಾಧಕಿಯರಿಗೆ, ಸದನದ ಎಲ್ಲಾ ಮಹಿಳಾ ಸದಸ್ಯರಿಗೆ ಹಾಗೂ ನಾಡಿನ ಎಲ್ಲಾ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಸದನದ ಮೂಲಕ ಕೋರಿದರು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡ ಕೂಡಲೇ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ ಅವರು, ವಿಶ್ವಸಂಸ್ಥೆಯು 2022ನೇ ಸಾಲಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸುಸ್ಥಿರ […]

ರಾಯಚೂರು ಜಿಲ್ಲೆಯ ವಿಮಾನ ನಿಲ್ದಾಣದ ಡಿಪಿಆರ್ ತಯಾರಿಸಲು 11 ಕೋಟಿ ಬಿಡುಗಡೆ

ಬೆಂಗಳೂರು,ಮಾ.7- ಕಲ್ಯಾಣ ಕರ್ನಾಟಕ ವ್ಯಾಪ್ತಿಯ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗೆ ವಿಸ್ತೃತ ಯೋಜನೆ ವರದಿ(ಡಿಪಿಆರ್) ತಯಾರಿಸಲು ಕೆಎಸ್‍ಐಡಿಸಿಗೆ 11 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ದಿ ಸಚಿವ ವಿ.ಸೋಮಣ್ಣ ವಿಧಾನಸಭೆಗೆ ತಿಳಿಸಿದರು. ಶಾಸಕ ಬಸಗೌಡ ದದ್ದಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2022-23ನೇ ಸಾಲಿನ ಆಯವ್ಯಯ ಘೋಷಣೆಯಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನು ಜಿಲ್ಲಾ ಖನಿಜ ಪ್ರತಿಷ್ಠಾನ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಆರ್ಥಿಕ ನೆರವಿನೊಂದಿಗೆ ಒಟ್ಟು […]

“ನಮ್ಮ ನೆಲವನ್ನು ವಿದೇಶಿಗರ ಧರ್ಮಛತ್ರವಾಗಲು ಬಿಡಲ್ಲ” : ಗೃಹ ಸಚಿವ ಜ್ಞಾನೇಂದ್ರ

ಬೆಂಗಳೂರು, ಮಾ.7- ನಮ್ಮ ನೆಲವನ್ನು ವಿದೇಶಿಗರಿಗೆ ಧರ್ಮ ಛತ್ರದ ರೀತಿ ಬಳಕೆಯಾಗಲು ಅವಕಾಶ ನೀಡುವುದಿಲ್ಲ. ವಿಸಾ ಅವ ಮುಗಿದ ಬಳಿಕ ರಾಜ್ಯದಲ್ಲಿ ನೆಲೆಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆ ನೀಡಿದ್ದರು. ವೈ.ಎ.ನಾರಾಯಣಸ್ವಾಮಿ ಪ್ರಸ್ತಾಪಿಸಿದ ಗಮನ ಸೆಳೆಯುವ ವಿಷಯಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿಲ 441 ಮಂದಿ ವಿದೇಶಿ ಪ್ರಜೆಗಳ ವಿರುದ್ಧ 296 ಪ್ರಕರಣಗಳನ್ನು ದಾಖಲಿಸಲಾಗಿದೆ. ಇವು ಇತ್ಯರ್ಥವಾಗುವವರೆಗೂ ಸ್ವದೇಶಕ್ಕೆ ವಾಪಾಸ್ ಹೋಗಲು ಅವಕಾಶ ಕೊಡದೆ, ನಿರ್ಬಂದ ಕೇಂದ್ರಗಳಲ್ಲಿ ಇರಿಸಲಾಗುವುದು. ಪ್ರಕರಣ ಅಂತ್ಯವಾದ […]

ವಸತಿ ಯೋಜನೆ ಪದೇ ಪದೇ ಮುಂದೂಡಿಕೆ : ಕಾಗೇರಿ ಅಸಮಾಧಾನ

ಬೆಂಗಳೂರು,ಮಾ.7-ವಸತಿ ಯೋಜನೆಗಳನ್ನು ಪದೇ ಪದೇ ಮುಂದೂಡುತ್ತಾ ಅನುದಾನ ಬಿಡುಗಡೆ ಮಾಡದಿರುವುದಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ಜರುಗಿತು. ಪ್ರಶ್ನೋತ್ತರ ಅವಧಿಯಲ್ಲಿ ಸಚಿವ ಸೋಮಣ್ಣ ಉತ್ತರಿಸುತ್ತಿದ್ದಾಗ , ಮಧ್ಯಪ್ರವೇಶಿಸಿದ ಸಭಾಧ್ಯಕ್ಷರು ಫಲಾನುಭವಿಗಳನ್ನು ಆಯ್ಕೆ ಮಾಡಿ ಹಲವು ವರ್ಷಗಳೇ ಕಳೆದಿವೆ. ಆದರೆ ಅವರಿಗೆ ಮನೆ ಮಂಜೂರು ಮಾಡದಿರುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಎಲ್ಲರೂ ಗಮನಹರಿಸಬೇಕು ಎಂದು ಸಲಹೆ ಮಾಡಿದರು. 2018-19ರಲ್ಲಿ ಮೀನುಗಾರರಿಗೆ ಮನೆ ಕಟ್ಟಿಸಿಕೊಡುವುದಾಗಿ ಘೋಷಣೆ ಮಾಡಲಾಗಿದೆ. ತಾಂತ್ರಿಕ ಕಾರಣಗಳನ್ನು ವೊಡ್ಡಿ ಮನೆಗಳನ್ನೇ […]

ವಿಧಾನಸಭೆಯಲ್ಲಿ ಕಚ್ಚಾಡಿಕೊಂಡ ಈಶ್ವರಪ್ಪ-ಡಿಕೆಶಿ..!

ಬೆಂಗಳೂರು,ಫೆ.16- ರಾಷ್ಟ್ರಧ್ವಜ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ್ದ ಹೇಳಿಕೆ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು ಗದ್ದಲ-ಗೊಂದಲ- ಕೋಲಾಹಲದಿಂದ ಸದನ ಮುಂದೂಡಿದ ಪ್ರಸಂಗ ಜರುಗಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡುತ್ತಾ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಅವರ ವಿರುದ್ಧ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದರು. ಇದನ್ನು ನಿರಾಕರಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಈಶ್ವರಪ್ಪ ಅವರು ರಾಷ್ಟ್ರ […]