ಚಾಮರಾಜನಗರ ಮತ್ತು ಹನೂರು ನಡುವೆ ಸಂಪರ್ಕ ರಸ್ತೆ : ಸಚಿವ ಸಿ.ಸಿ.ಪಾಟೀಲ್

ಬೆಂಗಳೂರು,ಮಾ.7- ಚಾಮರಾಜನಗರ ಮತ್ತು ಹನೂರು ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಹಣಕಾಸಿನ ಲಭ್ಯತೆ ಆಧಾರದ ಮೇಲೆ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ವಿಧಾನಸಭೆಯಲ್ಲಿಂದು ತಿಳಿಸಿದರು. ಶಾಸಕ ನರೇಂದ್ರ.ಆರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಲೆಮಹದೇಶ್ವರ ಬೆಟ್ಟಕ್ಕೆ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಜನರು ಪ್ರತಿದಿನ ಆಗಮಿಸುತ್ತಾರೆ. ಬರುವ ಭಕ್ತರಿಗೆ ಉತ್ತಮ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಆದ್ಯಕರ್ತವ್ಯ. ಹನೂರು ಮತ್ತು ಚಾಮರಾಜನಗರ ನಡುವೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಭಿವೃದ್ದಿ ಪಡಿಸಲಾಗುವುದು ಎಂದರು. 2020-21ನೇ ಸಾಲಿನಲ್ಲಿ […]