ಆಟೋ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ಮಂಡಳಿ ರಚಿಸಲು ಆಗ್ರಹ

ಬೆಂಗಳೂರು, ಫೆ.15- ರಾಜ್ಯದಲ್ಲಿನ ಆಟೋರಿಕ್ಷಾ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ನಿಗಮ ಅಥವಾ ಮಂಡಳಿ ರಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿಂದು ಆಗ್ರಹಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರಿದ್ದು, ಬಡ ಮಧ್ಯಮ ವರ್ಗದ ಜನರು, ಆಟೋರಿಕ್ಷಾವನ್ನು ಅವಲಂಬಿಸಿದ್ದಾರೆ. ಆದರೆ, ಆಟೋರಿಕ್ಷಾ ಚಾಲಕರಿಗೆ ಇಎಸ್ಐ, ಪಿಎಫ್, ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯವಿಲ್ಲ. ರಿಕ್ಷಾ ಚಾಲಕರು ಎಲ್ಲಾ ಜಾತಿ ವರ್ಗದವರು ಇದ್ದಾರೆ. […]

ಬೆಳಗಾವಿ ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ ರಾಜ್ಯದ ಜ್ವಲಂತ ಸಮಸ್ಯೆಗಳು

ಬೆಂಗಳೂರು, ಡಿ.18- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಾಳೆಯಿಂದ ಅರಂಭವಾಗಲಿರುವ ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನದಲ್ಲಿ ಮೀಸಲಾತಿ ಹೆಚ್ಚಳದ ಬೇಡಿಕೆ, ಮಳೆ ಹಾನಿ, ಅತಿವೃಷ್ಟಿ ಪರಿಹಾರ ನೀಡಿಕೆ ವಿಳಂಬ, ಮಾನವ-ಕಾಡು ಪ್ರಾಣಿಗಳ ನಡುವಿನ ಸಂಘರ್ಷ, ರಸ್ತೆಗಳ ದುಸ್ಥಿತಿ, ಗಡಿ ವಿವಾದ ಮೊದಲಾದ ಜ್ವಲಂತ ಸಮಸ್ಯೆಗಳು ಪ್ರತಿಧ್ವನಿಸಲಿವೆ. ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ. ಅದೇ ರೀತಿ ಆಡಳಿತ ಪಕ್ಷವು ಪ್ರತಿ ಪಕ್ಷಗಳ ಆಸಗಳಿಗೆ ಪ್ರತ್ಯಸ ಪ್ರಯೋಗಿಸಲು ತಯಾರಿ ಮಾಡಿಕೊಂಡಿದೆ. […]

ಬೆಳಗಾವಿ ಅಧಿವೇಶನದಲ್ಲಿ ಹೊರಟ್ಟಿ ಸಭಾಪತಿಯಾಗಿ ಆಯ್ಕೆ..?

ಬೆಳಗಾವಿ,ಡಿ.18- ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್‍ನಿಂದ ಪರಿಷತ್ ಸದಸ್ಯರಾಗಿದ್ದ ವೇಳೆ ಹೊರಟ್ಟಿ ಬಿಜೆಪಿ ಬೆಂಬಲದೊಂದಿಗೆ ಸಭಾಪತಿ ಸ್ಥಾನ ಅಲಂಕರಿಸಿದ್ದರು. ನಂತರ ಬಿಜೆಪಿ ಸೇರಿದ ಅವರು ಅವರಿಗೆ ಸಭಾಪತಿ ಸ್ಥಾನ ನೀಡುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅವರಿಗೆ ಸಭಾಪತಿ ಸ್ಥಾನ ಸಿಗುವ ಸಾಧ್ಯತೆ ಇದೆ. ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(18-12-2022) ಈ ಬಗ್ಗೆ ಬಿಜೆಪಿ ಪ್ರಧಾನ […]