ಮೃತ ಕಾರ್ಮಿಕರ ಅಂತ್ಯ ಸಂಸ್ಕಾರ ವೆಚ್ಚ ಹೆಚ್ಚಳ

ಬೆಂಗಳೂರು ಫೆ.14- ಮೃತ ಕಾರ್ಮಿಕರ ಅಂತ್ಯ ಸಂಸ್ಕಾರ ವೆಚ್ಚವನ್ನು 10 ಸಾವಿರದಿಂದ 20 ಸಾವಿರ ರೂ.ಗಳಿಗೆ ಹೆಚ್ಚಿಸಲು ನಗರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ನಡೆದ ನಗರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ 95ನೆ ಸಭೆಯಲ್ಲಿ ಕಾರ್ಮಿಕರ ವೈದ್ಯಕೀಯ ನೆರವು ಯೋಜನೆಗೆ ಇನ್ನೂ ಕೆಲವು ಶಸ್ತ್ರ ಚಿಕಿತ್ಸೆಗಳನ್ನು ಸೇರ್ಪಡೆಗೊಳಿಸುವ ಕುರಿತಂತೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. […]