ದೆಹಲಿಯಲ್ಲಿ ಖರ್ಗೆ ನೇತೃತ್ವದಲ್ಲಿ ನಡೆದ ಕರ್ನಾಟಕ ನಾಯಕರ ಸಭೆಯ ಸೀಕ್ರೆಟ್ ಬಿಚ್ಚಿಟ್ಟ ಕಾಂಗ್ರೆಸ್

ಬೆಂಗಳೂರು,ಡಿ.14- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ಈ ಸಭೆಯ ರಹಸ್ಯವನ್ನು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಬಿಚ್ಚಿಟ್ಟಿದೆ, ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದೆ. ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‍ನ ಒಳಜಗಳ ದಿನೇ ದಿನೇ ಹೆಚ್ಚಾಗಿ ಬೀದಿರಂಪವಾಗುತ್ತಿದೆ. ಇವರೆಲ್ಲ ದೇಶೋದ್ಧಾರಕ್ಕಾಗಿ ಗುದ್ದಾಡಿಕೊಳ್ಳುತ್ತಿಲ್ಲ ಎಂದು ವ್ಯಂಗ್ಯವಾಡಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜಗಳ ಬೀದಿಗೆ ಬಂದಿದೆ […]