ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ, ಜನ ಜೀವನ ಅಸ್ತವ್ಯಸ್ತ

ಬೆಂಗಳೂರು,ಜು.10- ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕೊಡಗು, ದಕ್ಷಿಣ ಕನ್ನಡ, ಕರಾವಳಿ, ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹಲವೆಡೆ ಗುಡ್ಡ ಕುಸಿತವಾಗಿ, ಸೇತುವೆಗಳು ಕೊಚ್ಚಿಹೋಗಿ, ರಸ್ತೆ ಸಂಚಾರಕ್ಕೆ ಅಡಚಣೆ… ವರುಣನ ಅವಾಂತರಕ್ಕೆ ಜನ ಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ಹೊಲಗದ್ದೆಗಳು ಜಲಾವೃತಗೊಂಡಿವೆ. ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಗೆ ಹಲವು ಮನೆಗಳು ಕುಸಿದಿವೆ. ರಾಮನಾಥಪುರ ಹೋಬಳಿಯಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಆಗುಂಬೆ ಘಾಟಿಯಲ್ಲಿ ಭೂಕುಸಿತ ಹಾಗೂ […]