ರಾಜ್ಯದ ಎಲ್ಲ ಸಿಎಂಗಳ ಬಗ್ಗೆ ಸಾಹಿತ್ಯ ರಚನೆ ಅಗತ್ಯ : ಬೊಮ್ಮಾಯಿ

ಬೆಂಗಳೂರು ಫೆ.25- ರಾಜ್ಯದ ಎಲ್ಲ ಮುಖ್ಯಮಂತ್ರಿಗಳ ಬಗ್ಗೆ ಸಾಹಿತ್ಯ ರಚನೆ ಮಾಡಿ ಜನರಿಗೆ, ಮಕ್ಕಳಿಗೆ ತಿಳಿಸುವ ಕೆಲಸ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಕಂಚಿನ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು. ಕರ್ನಾಟಕ ಏಕೀಕರಣದ ಹೋರಾಟ, ಆಗಿನ ಜನರ ಮನಸ್ಥಿತಿ,ಬೇರೆ ಬೇರೆ ಹೊರಾಟಗಳು, ಎಲ್ಲಾ ಮುಖ್ಯಮಂತ್ರಿಗಳು ತೆಗೆದುಕೊಂಡ ತಿರ್ಮಾನಗಳ ಒಂದು ಮ್ಯೂಸಿಯಂ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದರು. ಕೆ.ಸಿ.ರೆಡ್ಡಿ ಅವರ ಹುಟ್ಟೂರಲ್ಲಿ ಸ್ಮಾರಕ […]