ಮೋರ್ಬಿ ದುರ್ಘಟನೆ : ಅರವಿಂದ್ ಕೇಜ್ರಿವಾಲ್ ರೋಡ್ ಶೋ ರದ್ದು

ಚಂಡಿಗಡ್, ಅ.31- ಗುಜರಾತ್‍ನ ಮೋಬಿನಲ್ಲಿ ನಡೆದ ತೂಗು ಸೇತುವೆ ದುರಂತದಿಂದಾಗಿ ಹರ್ಯಾಣದ ಅದಂಪುರ್‍ನಲ್ಲಿ ನಡೆಯಬೇಕಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರೋಡ್ ಶೋ ರದ್ದುಗೊಂಡಿದೆ. ಅದಂಪುರ್‍ನಲ್ಲಿ ನಡೆಯಲಿರುವ ಉಪಚುನಾವಣೆ ಸಲುವಾಗಿ ವಿವಿಧ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ನವೆಂಬರ್ 3ಕ್ಕೆ ಉಪಚುನಾವಣೆ ನಡೆಯಲಿದ್ದು, ಮೊನ್ನಾ ದಿನ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಸೋಮವಾರ ರೋಡ್ ಶೋ ಹಮ್ಮಿಕೊಂಡಿದ್ದರು. ಭಾನುವಾರ ಮೋರ್ಬಿಯಲ್ಲಿ ತೂಗು ಸೇತುವೆ ಕುಸಿದು 132ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. […]