ಬಸವಣ್ಣ, ಕೆಂಪೇಗೌಡ ಪ್ರತಿಮೆ ಅನಾವರಣ

ಬೆಂಗಳೂರು,ಮಾ.26- ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ವಿವಿಧ ಸಮುದಾಯಗಳನ್ನು ಓಲೈಸಿಕೊಳ್ಳಲು ಮುಂದಾಗಿರುವ ಬಿಜೆಪಿ ಇಂದು ಒಂದೇ ದಿನ ಏಕಕಾಲಕ್ಕೆ ಮೂರು ಪ್ರತಿಮೆಗಳನ್ನು ಅನಾವರಣಗೊಳಿಸಿದೆ. ಆಡಳಿತ ಶಕ್ತಿಕೇಂದ್ರ ವಿಧಾನಸೌಧ ಮುಂಭಾಗ ನಿರ್ಮಾಣ ಮಾಡಿರುವ 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಪುತ್ಥಳಿಯನ್ನು ಅನಾವರಣ ಮಾಡಲಾಯಿತು.ಕೇಂದ್ರ ಗೃಹ ಸಚಿವ ಅಮಿತ್ ಷಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ […]
ಮಾ.24ಕ್ಕೆ ಬಸವಣ್ಣ-ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು,ಮಾ.9- ವಿಧಾನ ಸೌಧದ ಮುಂದೆ ನೂತನವಾಗಿ ನಿರ್ಮಾಣಗೊಂಡಿರುವ ಕಾಯಕಯೋಗಿ ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳು ಇದೇ 24ರಂದು ಅನಾವರಣಗೊಳ್ಳಲಿದೆ. ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಅಂದು ಎರಡು ಪ್ರತಿಮೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಉದ್ಘಾಟನೆ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ. ಕೇಂದ್ರ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದರೆ ನಂತರ ಆಯೋಗದ ಅನುಮತಿ ಪಡೆದು ಉದ್ಘಾಟಿಸಬೇಕಾಗುತ್ತದೆ. ಅದಕ್ಕೂ ಮೊದಲೇ ಸಿದ್ದಗೊಂಡಿರುವ […]
ವಿಧಾನಸೌಧ ಎದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಬೆಂಗಳೂರು,ಜ.13- ಆಡಳಿತ ಶಕ್ತಿಕೇಂದ್ರ ವಿಧಾನಸೌಧದ ಮುಂಭಾಗದಲ್ಲಿ ಬಹುನಿರೀಕ್ಷಿತ ನಾಡಪ್ರಭು ಕೆಂಪೇಗೌಡ ಹಾಗೂ ಕಾಯಕಯೋಗಿ ಬಸವಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಯವರ ಪ್ರತಿಮೆ ಪಕ್ಕ ಸುಮಾರು 8 ಕೋಟಿ ವೆಚ್ಚದಲ್ಲಿ ಸರ್ಕಾರ ಈ ಪ್ರತಿಮೆಗಳನ್ನು ನಿರ್ಮಾಣ ಮಾಡುತ್ತಿದ್ದು, ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಪ್ರತಿಮೆಗಳನ್ನು ಉದ್ಘಾಟಿಸುವ ಲೆಕ್ಕಾಚಾರದಲ್ಲಿ ಸರ್ಕಾರವಿದೆ. ಕಳೆದ ತಿಂಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರಮೋದಿ ಅವರು ಉದ್ಘಾಟಿಸಿದ್ದರು. […]
ವಿಧಾನಸೌಧದೆದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಜ.13 ರಂದು ಶಂಕುಸ್ಥಾಪನೆ

ಬೆಂಗಳೂರು,ಜ.10- ಆಡಳಿತ ಶಕ್ತಿ ಕೇಂದ್ರ ವಿಧಾನಸೌಧ ಮುಂಭಾಗ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ನಾಡಪ್ರಭು ಕೆಂಪೇಗೌಡ ಹಾಗೂ ಕಾಯಕಯೋಗಿ ಬಸವಣ್ಣನವರ ಪ್ರತಿಮೆಗೆ ಇದೇ 13ರಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಈ ಎರಡೂ ಪ್ರತಿಮೆಗಳನ್ನು ನಿರ್ಮಿಸಲಾಗುತ್ತಿದ್ದು, 13ರಂದು ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿ ಆದಷ್ಟು ಶೀಘ್ರ ಉದ್ಘಾಟನಾ ಕಾರ್ಯಕ್ರಮವು ನೆರವೇರಲಿದೆ. ಬಸವಣ್ಣ ಮತ್ತು ಕೆಂಪೇಗೌಡರ ಪ್ರತಿಮೆಗಳನ್ನು ಅಶ್ವಾರೂಢ ಮಾದರಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿದ್ದು, ಸಚಿವರಾದ ಆರ್.ಅಶೋಕ್ ಮತ್ತು […]
ಮೋದಿ ನಾಮಬಲವಿಲ್ಲದೆ ಬಿಜೆಪಿಯವರ ಯೋಗ್ಯತೆಗೆ ಠೇವಣಿ ಕೂಡ ಸಿಗಲ್ಲ : ಜೆಡಿಎಸ್

ಬೆಂಗಳೂರು,ನ.13-ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರ್ಕಾರ ಶಿಷ್ಟಾಚಾರದ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ ಎಂದು ಜೆಡಿಎಸ್ ಮತ್ತೆ ವಾಗ್ದಾಳಿ ಮಾಡಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ. ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಆಪರೇಷನ್ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು […]
ಕಾರ್ಯಕ್ರಮಕ್ಕೆ ದೇವೇಗೌಡರಿಗಿಲ್ಲ ಆಹ್ವಾನ, ಜೆಡಿಎಸ್ ಆಕ್ರೋಶ

ಬೆಂಗಳೂರು, ನ.11- ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಕನ್ನಡ ನೆಲದಿಂದ ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗರಾದ ಎಚ್.ಡಿ.ದೇವೇಗೌಡ ಅವರನ್ನು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ಸರಣಿ ಟ್ವಿಟ್ ಮಾಡಿರುವ ಜೆಡಿಎಸ್, ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರ್ಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ […]
ಕುಲ ಕುಲವೆಂದು ಹೊಡೆದಾಡದಿರಿ : ಮೋದಿ ಭಾಷಣದ ಹೈಲೈಟ್ಸ್

ಬೆಂಗಳೂರು,ನ.11-ಡಬಲ್ ಇಂಜಿನ್ ಸರ್ಕಾರದಿಂದ ನವಭಾರತ ನಿರ್ಮಾಣ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರಮೋದಿ ಪ್ರತಿಪಾದಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಅವರು ಹಲವು ಅಭಿವೃದ್ಧಿ ಕಾಮಗಾರಿಗಳಲ್ಲಿ ಭಾಗವಹಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರಗತಿ ಪ್ರತಿಮೆ ಅನಾವರಣದ ಮೂಲಕ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ,ಇಂದು ರಾಜ್ಯ ಮತು ರಾಷ್ಟ್ರಕ್ಕೆ ಉತ್ತಮ ಸಂದೇಶ ನೀಡಿದ ಕನಕದಾಸರು, ಒನಕೆ ಓಬವ್ವ ಅವರ ಜನ್ಮದಿನವಾದ ಇಂದು ರಾಜ್ಯಕ್ಕೆ ಭೇಟಿ ನೀಡಿರುವುದು ಹೆಚ್ಚು ಸಂತಸ ನೀಡಿದೆ ಎಂದರು. ಕನಕದಾಸರು […]
ಕೆಂಪೇಗೌಡರ ಚಿಂತನೆಯಂತೆಯೇ ಬೆಂಗಳೂರು ನಗರ ನಿರ್ಮಾಣ : ಸಿಎಂ

ಬೆಂಗಳೂರು,ನ.11-ನಾಡುಪ್ರಭು ಕೆಂಪೇಗೌಡರ ಆದರ್ಶ, ವಿಚಾರಧಾರೆ, ಚಿಂತನೆಯಂತೆಯೇ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಸಾಮಂತರಾಗಿದ್ದ ನಾಡಪ್ರಭು ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯ ಸುವರ್ಣ ಯುಗದ ಕಲ್ಪನೆಯಂತೆಯೇ ಬೆಂಗಳೂರು ನಗರ ನಿರ್ಮಾಣ ಮಾಡಿದ್ದರು. ಅವರ ದೂರದೃಷ್ಟಿಯಯಿಂದ ಕೆರೆಕಟ್ಟೆಗಳು, ಪೇಟೆಗಳನ್ನು ನಿರ್ಮಿಸಿ ಬೆಂಗಳೂರು ಕಟ್ಟಿದ್ದರು. ಇಂದು ಬೆಂಗಳೂರು ವಿಶ್ವಮಾನ್ಯತೆ ಪಡೆದಿದೆ. ಭವ್ಯ ರಾಜ್ಯ ನಿರ್ಮಾಣದ ಅವರ ಕನಸನ್ನು […]
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್-2 ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು,ನ.11- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆಯ ಭಾಗವಾಗಿ ನಿರ್ಮಿಸಲಾಗಿದ್ದ ಟರ್ಮಿನಲ್-2ನ್ನು ಪ್ರಧಾನಿ ನರೇಂದ್ರಮೋದಿ ಇಂದು ಲೋಕಾರ್ಪಣೆಗೊಳಿಸಿದರು. ಭಾರತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಕೆಐಎಎಲ್ನ್ನು ವಿಸ್ತರಣೆ ಮಾಡಲಾಗಿದೆ.ಟರ್ಮಿನಲ್ 2, ಎರಡನೇ ರನ್ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲ ಸೌಕರ್ಯವನ್ನು ಒಳಗೊಂಡಿದೆ. ಎರಡನೇ ಟರ್ಮಿನಲ್ನ್ನು ಎರಡು ಹಂತದಲ್ಲಿ ಅಭಿವೃದ್ಧಿ ಮಾಡಲಾಗಿದ್ದು, ಮೊದಲನೇ ಹಂತದಲ್ಲಿ 25 ಮಿಲಿಯನ್ […]
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆಗೆ ಭರದ ಸಿದ್ಧತೆ

ಬೆಂಗಳೂರು,ನ.8- ಇದೇ 11ರಂದು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ಅನಾವರಣಗೊಳ್ಳಲಿದೆ. ಕೆಂಪೇಗೌಡ ಅವರ ಇತಿಹಾಸ, ಸಾಧನೆ ಮತ್ತು ಪರಂಪರೆಯನ್ನು ಸಾರುವ ಆಕರ್ಷಕ ಕೆಂಪೇಗೌಡ ಥೀಮ್ ಪಾರ್ಕ್ ಕೂಡಾ ಅಂದೇ ಲೋಕಾರ್ಪಣೆಗೊಳ್ಳುತ್ತಿದೆ. ಥೀಮ್ ಪಾರ್ಕ್ ಸ್ಥಾಪನೆಗೆ ಸರಕಾರವು 30 ಕೋಟಿ ವಿನಿಯೋಗಿಸುತ್ತಿದೆ. 23 ಎಕರೆಯಲ್ಲಿ ಹೆರಿಟೇಜ್ ಪಾರ್ಕ್ ನಿರ್ಮಾಣವಾಗಿದೆ. 64 ಕೋಟಿ ರೂ. ವೆಚ್ಚದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಕಂಚಿನ ಪ್ರತಿಮೆಯ ಭಾಗವಾದ ಖಡ್ಗ 4 […]