ಕೇರಳದಲ್ಲಿ ಭೀಕರ ಬಸ್ ಅಪಘಾತ, 9 ಮಂದಿ ಸಾವು

ಪಾಲಕ್ಕಾಡ್(ಕೇರಳ ),ಅ.6- ಬಸ್‍ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿ, 40 ಮಂದಿ ಗಾಯಗೊಂಡಿರುವ ಘಟನೆ ವಡಕ್ಕೆಂಚೇರಿಯಲ್ಲಿ ನಡೆದಿದೆ.ಮಧ್ಯರಾತ್ರಿ ಖಾಸಗಿ ಪ್ರವಾಸಿ ಬಸ್ ಹಿಂದಿನಿಂದ ಸರ್ಕಾರಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಮೃತರಲ್ಲಿ ಐವರು ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಕೇರಳ ರಸ್ತೆ ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ. ಅತಿವೇಗವಾಗಿ ಬಂದ ಖಾಸಗಿ ಬಸ್, ಕಾರನ್ನು ಹಿಂದಿಕ್ಕುವ ಭರದಲ್ಲಿ ಮುಂದೆ ಹೋಗುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗೆ […]