ಕಾಂಗ್ರೆಸ್ ತೊರೆಯುವ ಹಾದಿಯಲ್ಲಿ ಮುನಿಯಪ್ಪ, ಸುಧಾಕರ್ ಜತೆ ಮಾತುಕತೆ
ಬೆಂಗಳೂರು,ಆ.26- ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡು ಒಂದು ಕಾಲು ಈಗಾಗಲೇ ಆಚೆ ಇಟ್ಟಿರುವ ಕೇಂದ್ರದ ಮಾಜಿ ಸಚಿವ ಹಾಗು ಪ್ರಭಾವಿ ನಾಯಕ ಕೆ.ಎಚ್.ಮುನಿಯಪ್ಪ ಅವರು, ಸಚಿವ ಸುಧಾಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಸದಾಶಿವನಗರದಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾ ಕರ್ ನಿವಾಸಕ್ಕೆ ಗೌಪ್ಯವಾಗಿಕಾರಿನಲ್ಲಿ ಆಗಮಿಸಿದ ಅವರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಮಾತುಕತೆ ವಿವರಗಳು ಪೂರ್ಣವಾಗಿ ಲಭ್ಯವಾಗಿಲ್ಲವಾದರೂ ಬಿಜೆಪಿಗೆ ಬಂದರೆ ಸೂಕ್ತ ಸ್ಥಾನಮಾನ […]