ನಿಷ್ಠೆಯ ನಾಯಕ ಖರ್ಗೆಗೆ ಎಐಸಿಸಿ ಪಟ್ಟ ಫಿಕ್ಸ್

ಬೆಂಗಳೂರು,ಅ.17- ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಇಂದು ದೇಶಾದ್ಯಂತ ಚುನಾವಣೆ ನಡೆದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಬಹುತೇಕ ಖಚಿತವಾಗಿದೆ. ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಚುನಾವಣಾ ಪ್ರಕ್ರಿಯೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೇರಳ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿತ್ತು. ಇಂದು ದೇಶಾದ್ಯಂತ ಸುಮಾರು 9100ಕ್ಕೂ ಹೆಚ್ಚು ಪ್ರತಿನಿಧಿಗಳು ಎಐಸಿಸಿ ಅಧ್ಯಕ್ಷರ ಆಯ್ಕೆಗೆ ಮತದಾನ ಮಾಡಿದ್ದಾರೆ. 22 ವರ್ಷಗಳ ಹಿಂದೆ ಸೋನಿಯಾ ಗಾಂಧಿ ಅವರು ಚುನಾವಣೆ ಮೂಲಕ ಆಯ್ಕೆಯಾಗಿದ್ದರು. […]
ಬಿಜೆಪಿ, RSSಗೆ ಹೆದರಿ ಗುಲಾಂನಬಿ ರಾಜೀನಾಮೆ ನೀಡಿದ್ದಾರೆ : ಖರ್ಗೆ
ಬೆಂಗಳೂರು,ಆ.27- ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂನಬಿ ಅಜಾದ್ ಬಿಜೆಪಿ, ಆರ್‍ಎಸ್‍ಎಸ್‍ಗೆ ಹೆದರಿ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಸರಿಯಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‍ನಲ್ಲಿ ಗುಲಾಂನಬಿ ಅಜಾದ್ 46 ವರ್ಷದಿಂದ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿ ಎಲ್ಲ ರೀತಿಯ ಅಧಿಕಾರಗಳನ್ನು ಪಡೆದಿದ್ದಾರೆ. 6 ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದರು. 20ರಿಂದ 25 ವರ್ಷಗಳ ಕಾಲ ಸಚಿವರಾಗಿದ್ದರು. ಪಕ್ಷದ ಮಟ್ಟದಲ್ಲೂ ಅತ್ಯುತ್ತಮ ಸ್ಥಾನ ಪಡೆದಿದ್ದರು ಎಂದು ಹೇಳಿದರು. ಪ್ರಸ್ತುತ ಪಕ್ಷಕ್ಕೆ ಒಳ್ಳೆಯ ಪರಿಸ್ಥಿತಿ ಇಲ್ಲ. […]