ಜಮೀನು ಒದಗಿಸಿದರೆ ಖೇಲೋ ಇಂಡಿಯಾ ಯೋಜನೆಯಡಿ ಸುಸಜ್ಜಿತ ಕ್ರೀಡಾಂಗಣಗಳ ನಿರ್ಮಾಣ
ಬೆಂಗಳೂರು,ಮಾ.9-ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಗತ್ಯವಿರುವ ಜಮೀನು ಒದಗಿಸಿದರೆ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾಪಟುಗಳಿಗೆ ಅಗತ್ಯವಿರುವ ಸುಸಜ್ಜಿತ ಕ್ರೀಡಾಂಗಣಗಳನ್ನು ನಿರ್ಮಾಣ ಮಾಡುವುದಾಗಿ ಯುವಜನ ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡ ಅವರು ವಿಧಾನಸಭೆಗೆ ತಿಳಿಸಿದರು. ಶಾಸಕ ದೇವಾನಂದ ಪೂಲ್‍ಸಿಂಗ್ ಚಹ್ವಾಣ್ ಪ್ರಶ್ನೆಗೆ ಉತ್ತರಿಸಿ, ಖೇಲೋ ಇಂಡಿಯಾ ಯೋಜನೆಯಡಿ ಕನಿಷ್ಠ ನಾಲ್ಕೂವರೆ ಜಮೀನಿನಲ್ಲಿ ಕ್ರೀಡಾಂಗಣ ನಿರ್ಮಿಸಿದರೆ ಕೇಂದ್ರ-ರಾಜ್ಯ ಸರ್ಕಾರ ಸಹಭಾಗಿತ್ವದಲ್ಲಿ 6.5 ಕೋಟಿ ಅನುದಾನವನ್ನು ನೀಡಲಾಗುವುದು. ನಮಗೆ ಎಲ್ಲಿ ಅಗತ್ಯವಿರುತ್ತದೆಯೋ ಅಂತಹ ಕಡೆ ಅನುದಾನದ ಲಭ್ಯತೆ ನೋಡಿಕೊಂಡು […]