ಕಿತ್ತೂರು ಕರ್ನಾಟಕ ಬಿಜೆಪಿಯ ಭದ್ರಕೋಟೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ,ಜ.28- ಬಿಜೆಪಿಯ ಚುನಾವಣಾ ಚಾಣುಕ್ಯ ಎಂದೇ ಹೆಸರಾಗಿರುವ ಅಮಿತ್ ಷಾ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಿರುವುದು ಕಾರ್ಯಕರ್ತರಲ್ಲಿ ಹೊಸ ಸಂಚಲನ ಸೃಷ್ಟಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಬಿಜೆಪಿಯ ಭದ್ರಕೋಟೆಯಾಗಿದೆ. ಸಮಗ್ರ ಕರ್ನಾಟಕ ದೃಷ್ಟಿಯಲ್ಲಿಟ್ಟುಕೊಂಡು ಅಮಿತ್ ಶಾ ರಾಜ್ಯದಲ್ಲಿ ಪ್ರವಾಸ ಮಾಡುತ್ತಾರೆ. ಕಳೆದ ತಿಂಗಳು ಮಂಡ್ಯಕ್ಕೆ ಬಂದಿದ್ದ ಅವರು, ಈಗ ಉತ್ತರ ಕರ್ನಾಟಕ ಭಾಗಕ್ಕೆ ಬಂದಿದ್ದು, ಮುಂದಿನ ತಿಂಗಳು ಹೈದರಾಬಾದ್ ಕರ್ನಾಟಕಕ್ಕೆ ಬರಲಿದ್ದಾರೆ ಎಂದರು. ಬಿಜೆಪಿ […]