ಚಾಕುವಿನಿಂದ ಹಲ್ಲೆ ನಡೆಸಿ ಮೊಬೈಲ್ ಸುಲಿಗೆ ಮಾಡಿದ್ದ ಇಬ್ಬರ ಬಂಧನ
ಬೆಂಗಳೂರು, ಮಾ.3- ಚಾಕುವಿನಿಂದ ಹಲ್ಲೆ ಮಾಡಿ ಮೊಬೈಲ್ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿ 1 ಲಕ್ಷ ರೂ. ಬೆಲೆಯ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಮತ್ತು ಚಾಕು ವಶಪಡಿಸಿಕೊಂಡಿದ್ದಾರೆ. ಜೆಜೆ ನಗರದ ಸಲ್ಮಾನ್ ಮತ್ತು ಚಂದಾಪುರದ ಇಜಾಮಿನ್ ಬಂಧಿತ ಆರೋಪಿಗಳು. ಇವರ ಬಂಧನದಿಂದ ಈ ಹಿಂದೆ ನಡೆದಿದ್ದ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ. ಫೆ.25ರಂದು ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ವ್ಯಕ್ತಿಯೊಬ್ಬರು ರಸ್ತೆ ಬದಿ ನಿಂತು ಬೌನ್ಸ್ ಗಾಡಿ […]