ಕೊಡಗಿನಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆ

ಬೆಂಗಳೂರು,ನ.8- ಕೊರೊನಾ, ಓಮಿಕ್ರಾನ್ ಸೋಂಕಿನಿಂದ ತತ್ತರಿಸಿದ್ದ ರಾಜ್ಯದ ಆರೋಗ್ಯ ಇಲಾಖೆಗೆ ಈಗ ಆಫ್ರಿಕನ್ ಹಂದಿ ಜ್ವರದ ಆತಂಕ ಎದುರಾಗಿದೆ. ಕೊಡಗಿನಲ್ಲಿ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡು ಜನರು ಆತಂಕದಲ್ಲಿದ್ದಾರೆ. ಮೊದಲೇ ಕೊರೊನಾದಿಂದ ಎರಡು ವರ್ಷ ತತ್ತರಿಸಿದ್ದ ರಾಜ್ಯದ ಜನತೆಗೆ ಇದೀಗ ಆಫ್ರಿಕನ್ ಹಂದಿ ಜ್ವರ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಜ್ವರ ಮನುಷ್ಯನಿಗೆ ಬಂದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಾಮಾನ್ಯ ಹಂದಿ ಜ್ವರಕ್ಕಿಂತಲೂ ಇದರ ತೀವ್ರತೆ ಹೆಚ್ಚಾಗಿದ್ದು, ಹಂದಿಯಿಂದ ಮನುಷ್ಯರಿಗೂ ಬರುವ ಸಾಧ್ಯತೆ ಇದ್ದು, ಆರೋಗ್ಯ […]
ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ, ಭಕ್ತರ ಕಾತುರ

ಮಡಿಕೇರಿ, ಅ.17- ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 7.21 ನಿಮಿಷಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉದ್ಭವವಾಗಲಿದ್ದಾಳೆ. ಕೊರೊನಾದಿಂದ ಕಳೆದ ಎರಡು ವರ್ಷಗಳಿಂದ ತಲ ಕಾವೇರಿಯಲ್ಲಿ ತೀರ್ಥೋದ್ಭವ ಸಂದರ್ಭದಲ್ಲಿ ಭಕ್ತರಿಗೆ ಅವಕಾಶ ಕಲ್ಪಿಸಿರಲಿಲ್ಲ. ಕಾವೇರಿ ಮಾತೆಗೆ ಸರಳವಾಗಿ ಪೂಜೆ ಸಲ್ಲಿಸಲಾಗಿತ್ತು. ಈ ಬಾರಿ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ತೀರ್ಥೋದ್ಭವದ […]
ಕೊಡಗಿನಲ್ಲಿ ಯಾವ ಪ್ರತಿಭಟನೆಗೂ ಅವಕಾಶ ಇಲ್ಲ: ಆರಗ ಜ್ಞಾನೇಂದ್ರ
ಬೆಂಗಳೂರು,ಆ.23- ಕೊಡಗಿನಲ್ಲಿ ಪ್ರತಿಭಟನೆ ಮಾಡಲು ಯಾವುದೇ ಪಕ್ಷಕ್ಕೆ ಅವಕಾಶವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಕೆಜಿಎಫ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ರಾಜಕೀಯ ಪಕ್ಷಗಳ ಜಗಳದಿಂದ ಕೊಡಗಿನಲ್ಲಿ ಶಾಂತಿ ಕದಡಬಾರದು. ಹಾಗಾಗಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆಯನ್ನು ಯಾರೂ ಕೂಡ ಉಲ್ಲಂಘಟನೆ ಮಾಡಬಾರದು ಎಂದು ಹೇಳಿದ್ದಾರೆ. ನಮಗೆ ಕೊಡಗಿನ ಜನರ ಶಾಂತಿ ಮುಖ್ಯ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ. ಕಾಂಗ್ರೆಸ್ […]
ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಡಿಕೇರಿ ಚಲೋ ರದ್ದು
ಬೆಂಗಳೂರು, ಆ.23- ಕೊಡಗಿನಲ್ಲಿ ಮೂರು ದಿನಗಳ ನಿಷೇಧಾಜ್ಞೆ ವಿಧಿಸಿರುವುದರಿಂದ ಆ.26ರಂದು ಆಯೋಜಿಸಿದ್ದ ಮಡಿಕೇರಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಆದೇಶ ಎಂದರೆ ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಾವು ಸರ್ಕಾರದ ಆದೇಶ ಪರಿಪಾಲಿಸುತ್ತೇವೆ. ಕೊಡಗು ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ಮುಂದೂಡಲು ನಿರ್ಧರಿಸಿದ್ದೇವೆ ಎಂದರು. ಆಗಸ್ಟ್18ರಂದು ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಹಾನಿಯನ್ನು ಪರಿಶೀಲಿಸಲು ತೆರಳಿದ್ದೆ. ವಾಡಿಕೆಗಿಂತಲೂ ಎರಡು-ಮೂರು ಪಟ್ಟು ಹೆಚ್ಚು ಮಳೆ […]
ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಮೊಟ್ಟೆ ಎಸೆತ ಪ್ರಕರಣ
ಬೆಂಗಳೂರು,ಆ.22- ರಾಜ್ಯ ರಾಜಕಾರಣದಲ್ಲಿ ಹೊತ್ತಿಕೊಂಡಿರುವ ಮೊಟ್ಟೆ ಎಸೆತ ಹಾಗೂ ಮಾಂಸ ಸೇವನೆ ಪ್ರಕರಣ ಮತ್ತಷ್ಟು ವಿವಾದ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಪ್ರಕರಣವನ್ನು ಎರಡೂ ಪಕ್ಷಗಳು ತಮ್ಮ ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಕಸರತ್ತು ನಡೆಸುತ್ತಿವೆ. ಚುನಾವಣಾ ವರ್ಷ ಆಗಿರುವುದರಿಂದ ಪ್ರಕರಣವನ್ನು ಜೀವಂತವಾಗಿಟ್ಟಷ್ಟು ಮತ ಗಳಿಕೆ ಹೆಚ್ಚಾಗುತ್ತದೆ ಎಂಬುದು ಎರಡೂ ರಾಷ್ಟ್ರೀಯ ಪಕ್ಷಗಳ ಲೆಕ್ಕಾಚಾರವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರು ಚಲಿಸುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಸಂಪತ್ ಯಾವ ರಾಜಕೀಯ ಪಕ್ಷದ […]
ಮೊಟ್ಟೆ ಎಸೆದ ಪ್ರಕರಣ, ಮುಂದುವರೆದ ಬಿಜೆಪಿ-ಕಾಂಗ್ರೆಸ್ ಸಂಘರ್ಷ
ಬೆಂಗಳೂರು, ಆ.21- ಕೊಡಗಿನಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ದಾಳಿ ಪ್ರಕರಣದಲ್ಲಿ ಮತ್ತಷ್ಟು ಆರೋಪ ಪ್ರತ್ಯಾರೋಪಗಳು ಮುಂದುವರೆದಿವೆ. ರಾಜ್ಯ ಮತ್ತು ದೇಶದ ಪ್ರಮುಖ ಸಮಸ್ಯೆಗಳು ಮತ್ತೊಮ್ಮೆ ವಿಷಯಾಂತರವಾಗಿವೆ. ಮೊಟ್ಟೆ ಎಸೆದ ಆರೋಪಿ ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಂಬಿಸಿದ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.ಆತ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೂ ಬಂಧನ ಮಾಡಿ ಕ್ರಮ ಕೈಗೊಳ್ಳುವ ಬದಲು ಹಿತ ರಕ್ಷಣೆ ಮಾಡುವ ಧಾವಂತ ಯಾಕೆ ಎಂದು ಪ್ರಶ್ನಿಸಿದೆ. ಸಿದ್ದರಾಮಯ್ಯ ಕೊಡಗಿನಲ್ಲಿ ನೆರೆ ಹಾವಳಿಯನ್ನು ಪರಿಶೀಲನೆ ನಡೆಸಲು […]
ಕಸ್ತೂರಿರಂಗನ್ ವರದಿ ವಿರೋಧಿಸಿ ಹಾಸನ-ಕೊಡಗು-ಚಿಕ್ಕಮಗಳೂರು ಬಂದ್
ಚಿಕ್ಕಮಗಳೂರು,ಜು.19- ಕಸ್ತೂರಿರಂಗನ್ ವರದಿ ವಿರೋಧಿಸಿ ಇದೇ 27 ರಂದು ಹಾಸನ, 28 ರಂದು ಕೊಡಗು, 29 ರಂದು ಚಿಕ್ಕಮಗಳೂರು ಬಂದ್ ಮಾಡಿ ಸರ್ಕಾರದ ಗಮನ ಸೆಳೆಯಲು ವಿವಿಧ ಸಂಘಟನೆಗಳು ತೀರ್ಮಾನಿಸಿವೆ. ನಗರದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರತಿ ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಕೇಂದ್ರ ಪರಿಸರ ಇಲಾಖೆಗೆ ಮನವಿ ಸಲ್ಲಿಸಬೇಕು. ಮೂರು ಜಿಲ್ಲಾಗಳ ಎಲ್ಲಾ ಶಾಸಕರು, ಸಂಸದರನ್ನು ಭೇಟಿಯಾಗಿ ಸಮಸ್ಯೆ ವಿವರಿಸಿ ಬೆಂಗಳೂರಿನಲ್ಲಿ ಸಭೆ ಆಯೋಜಿಸಬೇಕು. ಮುಖ್ಯಮಂತ್ರಿ, ಕೇಂದ್ರ ಪರಿಸರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಲು […]
ಮಳೆ ಆರ್ಭಟಕ್ಕೆ ಕೊಡಗಿನ ಅಯ್ಯಪ್ಪ ಬೆಟ್ಟ ಬಿರುಕು, ನೂರಾರು ಜನರ ಸ್ಥಳಾಂತರ
ಬೆಂಗಳೂರು,ಜು.16- ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಭೂ ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ನದಿಗಳು ಉಕ್ಕಿ ಹರಿದು, ಜಲಾಶಯಗಳು ಭರ್ತಿಯಾಗಿ ಒಳಹರಿವು ಹೆಚ್ಚಾಗಿ ನದಿಪಾತ್ರದ ಜನರನ್ನು ಸ್ಥಳಾಂತರ ಮಾಡಲಾಗಿದೆ.ಹಾಸನದಿಂದ ಸಕಲೇಶಪುರ ಮಾರ್ಗದಲ್ಲಿ ದೋಣಿಗಲ್ ಸಮೀಪ ಭೂ ಕುಸಿತ ಉಂಟಾಗಿ ಶಿರಾಡಿ ಘಾಟ್ ಸಂಪರ್ಕ ಬಂದ್ ಮಾಡಲಾಗಿದೆ. ಕಳೆದ 10 ದಿನಗಳಿಂದ ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ನದಿ, ತೊರೆ, […]
ಹೊಸ ತಂತ್ರಜ್ಞಾನದ ಮೂಲಕ ಕಡಲ್ಕೊರೆತ ನಿಯಂತ್ರಣಕ್ಕೆ ತೀರ್ಮಾನ : ಸಿಎಂ
ಉಡುಪಿ,ಜು.13- ಹೊಸ ತಂತ್ರಜ್ಞಾನದ ಮೂಲಕ ಕಡಲ್ಕೊರೆತ ನಿಯಂತ್ರಣಕ್ಕೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು, ದಕ್ಷಿಣ ಕನ್ನಡ ಭಾಗಗಳಲ್ಲಿ ಭೂ ಕುಸಿತ, ಭೂ ಕಂಪನಕ್ಕೆ ಸಂಬಂಧಿಸಿದಂತ ನಾಲ್ಕು ಸಂಸ್ಥೆಗಳ ಮೂಲಕ ಅಧ್ಯಯನಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು. ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. ಕರಾವಳಿಯ ಮೂರು ಜಿಲ್ಲೆಗಳ ಕಡಲ್ಕೊರೆತ, ಮಳೆಹಾನಿ, ಪ್ರವಾಹ ಪರಿಸ್ಥಿತಿ ಸಹಿತ ವಿವಿಧ ವಿಷಯಗಳ […]
ಮಲೆನಾಡು, ದಕ್ಷಿಣ ಕನ್ನಡದಲ್ಲಿ ತಗ್ಗಿದ ಮಳೆ ಆರ್ಭಟ
ಬೆಂಗಳೂರು,ಜು.13- ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಮಳೆ ಕಡಿಮೆಯಾಗಿರುವುದರಿಂದ ಕಾವೇರಿ ಕಣಿವೆಯ ನದಿಗಳ ಪ್ರವಾಹವು ಇಳಿಕೆಯಾಗತೊಡಗಿದೆ. ಕೆಆರ್‍ಎಸ್ ಜಲಾಶಯಕ್ಕೆ ನಿನ್ನೆ 72ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು,ಇಂದು 57 ಸಾವಿರ ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಆದರೆ, ಕಬಿನಿ ಜಲಾಶಯಕ್ಕೆ ಮಾತ್ರ 34ಸಾವಿರ ಕ್ಯೂಸೆಕ್‍ನಷ್ಟು ನೀರು ಹರಿದು ಬರುತ್ತಿದೆ. ಹೀಗಾಗಿ ಜಲಾಶಯದಿಂದ 38 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಕಪಿಲಾ ನದಿಗೆ ಬಿಡಲಾಗಿದೆ. ಕೆಆರ್‍ಎಸ್ ಜಲಾಶಯದಿಂದ 51ಸಾವಿರಕ್ಕೂ ಹೆಚ್ಚು ಕ್ಯೂಸೆಕ್ […]