ರಾಜ್ಯದಲ್ಲಿ ವರುಣಾರ್ಭಟಕ್ಕೆ ನಲುಗಿದ ಜನ

ಬೆಂಗಳೂರು,ಜು.11-ಮಲೆನಾಡು, ಕರಾವಳಿ, ಕೊಡುಗು, ಶಿವಮೊಗ್ಗ ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಗುಡ್ಡ ಕುಸಿತ ಉಂಟಾಗಿ ರಸ್ತೆಗಳ ಸಂಚಾರ ಕಡಿತಗೊಂಡಿದೆ. ನದಿ ಹಳ್ಳಕೊಳ್ಳಗಳು ತುಂಬಿ ತುಳುಕುತ್ತಿದ್ದು, ನದಿಪಾತ್ರದ ಜನರು ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಶಿರಾಡಿಘಾಟ್, ಚಾರ್ಮುಡಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಗೊಳಿಸಲಾಗಿದೆ. ಕರಾವಳಿ, ಉತ್ತರಕನ್ನಡ, ದಕ್ಷಿಣ ಕನ್ನಡದಲ್ಲಿ ನಿರಂತರ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಮಡಿಕೇರಿಯಲ್ಲಿ ಮಳೆಯೊಂದಿಗೆ ದಟ್ಟ ಮಂಜು ಆವರಿಸಿದ್ದು, ರಸ್ತೆ ಕಾಣದೆ ವಾಹನ ಸವಾರರು ಪರದಾಡುತ್ತಿದ್ದಾರೆ. ಹಲವೆಡೆ […]

ನಾಳೆ ಕೊಡಗು- ದಕ್ಷಿಣ ಕನ್ನಡಕ್ಕೆ ಜಿಲ್ಲೆಗಳಿಗೆ ಸಿಎಂ ಭೇಟಿ

ಬೆಂಗಳೂರು,ಜು.11-ಸತತ ಮಳೆಯಿಂದ ತತ್ತರಿಸಿರುವ ಕೊಡುಗು, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಾಳೆ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕಳೆದ 10 ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಚರ್ಚೆ ಮಾಡಿ ಸಲಹೆ ಸೂಚನೆ ನೀಡಲಾಗಿದೆ. […]