ಅಖಾಡ ಆಯ್ದುಕೊಂಡ ಟಗರು, ಕೋಲಾರದಲ್ಲೇ ಸಿದ್ದರಾಮಯ್ಯ ಸ್ಪರ್ಧೆ

ಬೆಂಗಳೂರು,ಜ.9- ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆಗೆಬಿದ್ದಿದೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಸಿದ್ದರಾಮಯ್ಯನವರೇ ಇಂದು ಘೋಷಣೆ ಮಾಡಿದ್ದಾರೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಕೆಲ ಕಾಂಗ್ರೆಸ್ ನಾಯಕರ ಜೊತೆ ಕೋಲಾರದ ಪ್ರಮುಖ ನಾಯಕ ಹಾಗೂ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿ ನಂತರ ಕೋಲಾರದಲ್ಲೇ ಸ್ಪರ್ಧಿಸುವುದಾಗಿ ಸ್ವತಃ ಸಿದ್ದರಾಮಯ್ಯ ಅವರೇ ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಕಳೆದ ಬಾರಿ ಬಾಗಲಕೋಟೆಯ ಬಾದಾಮಿ […]