ಉಕ್ಕಿ ಹರಿದ ಕಾವೇರಿ, ಜಮೀನುಗಳು ಜಲಾವೃತ, ಸಂಕಷ್ಟದಲ್ಲಿ ಅನ್ನದಾತ

ಕೊಳ್ಳೆಗಾಲ,ಜು.12- ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ತಾಲ್ಲೂಕಿನ ನದಿ ತೀರದ ಗ್ರಾಮಗಳು ಪ್ರವಾಹದ ಭೀತಿ ಎದುರಿಸುವಂತಾಗಿದ್ದು, ತಾಲ್ಲೂಕಿನ ಹಳೇ ಹಂಪಾಪುರ ಗ್ರಾಮದ ಜಮೀನುಗಳು ಪ್ರವಾಹ ದಿಂದ ಜಲಾವೃತವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಕಳೆದ 4 ವರ್ಷಗಳಿಂದ ಸತತವಾಗಿ ಪ್ರವಾಹ ಭೀತಿ ಎದುರಿಸುತ್ತಿರುವ ಈ ಗ್ರಾಮಗಳ ಜನ ಈ ಭಾರಿಯು ಪ್ರವಾಹ ಭೀತಿ ಎದುರಿಸುವಂತಾಗಿದೆ. ಕೇರಳದ ಕರಾವಳಿ ತೀರದ ಜಿಲ್ಲಾಗಳಲ್ಲಿ ವರುಣ ನಿರಂತರವಾಗಿ ಆರ್ಭಟಿಸುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ನಿರಂತರವಾಗಿ […]