ವಿಭಾಗ ಮಟ್ಟದಲ್ಲಿ ವೃದ್ಧಾಶ್ರಮ ಸ್ಥಾಪನೆ : ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು,ಫೆ.14- ಹಿರಿಯ ನಾಗರೀಕರಿಗಾಗಿ ವಿಭಾಗ ಮಟ್ಟದಲ್ಲಿ ವೃದ್ಧಾಶ್ರಮಗಳನ್ನು ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹಾಗೂ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಪ್ರತಾಪ್ಸಿಂಹ ನಾಯಕ್ ಅವರ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಪರವಾಗಿ ಉತ್ತರಿಸಿದ ಕೋಟಾ ಶ್ರೀನಿವಾಸ ಪೂಜಾರಿ, 2011ರ ಜನಗಣತಿ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 58 ಲಕ್ಷ ಹಿರಿಯ ನಾಯಕರಿದ್ದಾರೆ. 60 ವರ್ಷ ಮೇಲ್ಪಟ್ಟವರಿಗೆ ವಿವಿಧ ಹಂತದಲ್ಲಿ ಪಿಂಚಣಿ ನೀಡಲಾಗುತ್ತಿದೆ. 18 ಲಕ್ಷ ಜನ […]