ಹಕ್ಕಿಜ್ವರ ಭೀತಿ : ಕೇರಳದಲ್ಲಿ 6 ಸಾವಿರಕ್ಕೂ ಹೆಚ್ಚು ಪಕ್ಷಿಗಳ ಮಾರಣಹೋಮ

ಕೊಟ್ಟಾಯಂ, ಡಿ.25- ಕೇರಳದಲ್ಲಿ ಹಕ್ಕಿಜ್ವರ ಭೀತಿ ಎದುರಾಗಿದೆ. ಕೊಟ್ಟಾಯಂನಲ್ಲಿ ಹಕ್ಕಿಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ 6 ಸಾವಿರಕ್ಕೂ ಹೆಚ್ಚು ಹಕ್ಕಿಗಳನ್ನು ಹತ್ಯೆ ಮಾಡಲಾಗಿದೆ. ಮುಂದಿನ ಮೂರು ದಿನಗಳ ಕಾಲ ಮಾಂಸ ಮತ್ತು ಮೊಟ್ಟೆ ಮಾರಾಟ ಕೂಡ ನಿಷೇಧ ಮಾಡಲಾಗಿದೆ. ಕೊಟ್ಟಾಯಂನ ವೇಚೂರು, ನಿಂದೂರು, ಅರ್ಪುಕರ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಕ್ಕಿಗಳನ್ನು ಕೊಲ್ಲಲಾಗಿದೆ. ವೇಚೂರು ಗ್ರಾಪಂನಲ್ಲಿ 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನಿಂದೂರು ಪಂಚಾಯ್ತಿಯಲ್ಲಿ 2750 ಕೋಳಿ, ಅರ್ಪುಕರದಲ್ಲಿ 3000 ಕೋಳಿ ಸೇರಿ 6017 ಕೋಳಿಗಳನ್ನು ಹತ್ಯೆ ಮಾಡಲಾಗಿದೆ ಎಂದು […]