ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು,ಫೆ.24- ಸಿಎಂ ಬಸವರಾಜ ಬೊಮ್ಮಾಯಿ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಹಿಂದಿನ ಕಾಂಗ್ರೆಸ್ ಸರ್ಕಾರ ತನ್ನ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಮುಚ್ಚಿಕೊಳ್ಳಲು ಎಸಿಬಿ ರಚನೆ ಮಾಡಿತ್ತು ಎಂದು ಸುಳ್ಳು ಹೇಳಿರುವುದು ಖಂಡನೀಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಡ್ವೊಕೇಟ್ ಜನರಲ್ ಅವರ ಮೂಲಕ ಎಸಿಬಿ ರಚನೆ ಮಾಡಿರುವುದು ಸರಿಯಿದೆ, ಎಸಿಬಿಯು ಲೋಕಾಯುಕ್ತ ಕಾಯ್ದೆಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಕೋರ್ಟಿನಲ್ಲಿ ಹೇಳಿಸಿದ್ದಾರೆ. ಆದರೆ ಹೊರಗಡೆ ತಮ್ಮ ನಿಲುವಿಗೆ ವಿರುದ್ಧವಾಗಿ ವರ್ತಿಸುತ್ತಿದ್ದಾರೆ. […]

ದೆಹಲಿಯಲ್ಲಿ ಖರ್ಗೆ ನೇತೃತ್ವದಲ್ಲಿ ನಡೆದ ಕರ್ನಾಟಕ ನಾಯಕರ ಸಭೆಯ ಸೀಕ್ರೆಟ್ ಬಿಚ್ಚಿಟ್ಟ ಕಾಂಗ್ರೆಸ್

ಬೆಂಗಳೂರು,ಡಿ.14- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ಈ ಸಭೆಯ ರಹಸ್ಯವನ್ನು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಬಿಚ್ಚಿಟ್ಟಿದೆ, ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದೆ. ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‍ನ ಒಳಜಗಳ ದಿನೇ ದಿನೇ ಹೆಚ್ಚಾಗಿ ಬೀದಿರಂಪವಾಗುತ್ತಿದೆ. ಇವರೆಲ್ಲ ದೇಶೋದ್ಧಾರಕ್ಕಾಗಿ ಗುದ್ದಾಡಿಕೊಳ್ಳುತ್ತಿಲ್ಲ ಎಂದು ವ್ಯಂಗ್ಯವಾಡಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜಗಳ ಬೀದಿಗೆ ಬಂದಿದೆ […]

ರಾಜಾಜಿನಗರದ ಟಿಕೆಟ್‌ಗಾಗಿ ಎಸ್.ನಾರಾಯಣ ಅರ್ಜಿ

ಬೆಂಗಳೂರು, ನ.17- ನಟ-ನಿರ್ಮಾಪಕ ಎಸ್. ನಾರಾಯಣ್ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ರ್ಪಸಲು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದಾರೆ. ರಾಜಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ರ್ಪಸಲು ಅವಕಾಶ ಕಲ್ಪಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ.ಈಗಾಗಲೇ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿ ಚುನಾವಣೆಗೆ ಅಣಿಯಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದು, ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಉಮೇಶ್ ಕತ್ತಿ, ಆನಂದ ಮಾಮನಿ ಕ್ಷೇತ್ರಗಳಿಗೆ ಅಭ್ಯರ್ಥಿಗಳಿಲ್ಲದೆ ಹೆಣಗಾಡುತ್ತಿರುವ ಬಿಜೆಪಿ ರಾಜಾಜಿನಗರ ಕ್ಷೇತ್ರದವರೇ ಆಗಿರುವ ಎಸ್.ನಾರಾಯಣ್ ಅವರು ಅಕೃತವಾಗಿ ರಾಜಕೀಯ ಅಖಾಡಕ್ಕೆ ಧುಮುಕಿರುವುದು ಸಂಚಲನ ಸೃಷ್ಟಿಸಿದೆ. […]