“ಶಾಲಾಭಿವೃದ್ಧಿ ಸಮಿತಿಗೆ ಪೋಷಕರೇ ಅಧ್ಯಕ್ಷರಾಗಲಿ”

ಬೆಂಗಳೂರು, ಫೆ.7- ಕೆಪಿಎಸ್ ಶಾಲೆಗಳಲ್ಲಿ ಆ ಕ್ಷೇತ್ರದ ಶಾಸಕರನ್ನು ಅಧ್ಯಕ್ಷರನ್ನಾಗಿಸಿರುವ ತಿದ್ದುಪಡಿ ಆದೇಶ ನಿಯಮ ಬಾಹಿರವಾಗಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕು ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾಪೋಷಕರಾದ ಪಿ.ನಿರಂಜನಾರಾಧ್ಯ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಯವರೆಗೆ ಗುಣಾತ್ಮಕ ಶಿಕ್ಷಣ ಒದಗಿಸಲು ಪ್ರಾರಂಭಿಸಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (ಕೆಪಿಎಸ್) ಈ ಹಿಂದೆ ಶಿಕ್ಷಣ ಹಕ್ಕು ಕಾಯಿದೆ ಹಾಗು ನಿಯಮಗಳ ಅನ್ವಯ ಪಾಲಕರಿಂದ ಆಯ್ಕೆಯಾದ ಪೋಷಕ […]