ನಾಳೆ ಕತ್ತಲಲ್ಲಿ ಮುಳುಗುವುದೇ ಕರ್ನಾಟಕ..?

ಬೆಂಗಳೂರು,ಮಾ.15- ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕೆಪಿಟಿಸಿಎಲ್ ನೌಕರರು ಸಾಮೂಹಿಕ ರಜೆ ಹಾಕಿ ಮುಷ್ಕರ ನಡೆಸಲು ತೀರ್ಮಾನಿಸಿರುವುದರಿಂದ ನಾಳೆ ಇಡಿ ರಾಜ್ಯ ಕತ್ತಲಲ್ಲಿ ಮುಳುಗುವ ಸಾಧ್ಯತೆಗಳಿವೆ. ತಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿರುವುದರಿಂದ ನಾಳೆಯಿಂದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ ಸಿಬ್ಬಂದಿಗಳು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ರೂ ಸರ್ಕಾರ ಸ್ಪಂದಿಸದ ಕಾರಣ ಮುಷ್ಕರದ ನಿರ್ಧಾರ ಕೈಗೊಳ್ಳಲಾಗಿದೆ.ಕಳೆದ 14 ದಿನದ ಹಿಂದೆಯೇ ಮುಷ್ಕರದ ನೋಟೀಸ್ ಕೊಟ್ಟಿದ್ದ ನೌಕರರ ಸಂಘ ಹಮ್ಮಿಕೊಂಡಿರುವ ಮುಷ್ಕರಕ್ಕೆ ಮಾಜಿ ನೌಕರರು […]

KPTCL ಸೇರಿ ವಿದ್ಯುತ್ ನಿಗಮಗಳ ಮೇಲಿದೆ 38,973 ಕೋಟಿ ಸಾಲ

ಬೆಂಗಳೂರು,ಸೆ.19-ಕೆಪಿಟಿಸಿಎಲ್ ಸೇರಿದಂತೆ ವಿವಿಧ ವಿದ್ಯುತ್ ಪ್ರಸರಣ ನಿಗಮಗಳು 2002ರಿಂದ ಈವರೆಗೂ 38,973 ಕೋಟಿ ರೂ. ಸಾಲ ಮಾಡಿದ್ದು, ಅದು 2040ರ ವೇಳೆಗೆ ತೀರುವಳಿಯಾಗಲಿದೆ ಎಂದು ಇಂಧನ ಸಚಿವ ವಿ.ಸುನೀಲ್‍ಕುಮಾರ್ ತಿಳಿಸಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಪಿಟಿಸಿಎಲ್ 9,590.99 ಕೋಟಿ, ಬೆಸ್ಕಾಂ- 13,613.23 ಕೋಟಿ, ಚೆಸ್ಕಾಂ 3536 ಕೋಟಿ, ಮೆಸ್ಕಾಂ- 1282 ಕೋಟಿ, ಹೆಸ್ಕಾಂ- 7480 ಕೋಟಿ, ಜೆಸ್ಕಾಂ 3472 ಕೋಟಿ ಸಾಲ ಪಡೆದಿವೆ. ಇವುಗಳಿಗೆ ಬಡ್ಡಿ ಮತ್ತು ಅಸಲು […]

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ : ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

ಬೆಳಗಾವಿ, ಆ.26- ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಗೆ ನಡೆದ ಪರೀಕ್ಷೆಗೆ ಪತ್ರಿಕೆ ಲೀಕ್ ಮಾಡಿದ ಮೂಲಸ್ಥಾನ ಗದಗ ಮೂಲದ ಮುನ್ಸಿಪಲ್ ಕಾಲೇಜು ಉಪಪ್ರಾಂಶುಪಾಲ ಮಾರುತಿ ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಸುಮಾರು 3ರಿಂದ 8 ಲಕ್ಷದವರೆಗೂ ಡೀಲ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮಾರುತಿ ಜೊತೆ ಮತ್ತೊಬ್ಬ ಕಿಂಗ್ ಪಿನ್ ಸಂಜುಬಂಡಾರಿ ಈ ದಂಧೆ ಪ್ರಮುಖ ಆರೋಪಿ ಎಂದು ತಿಳಿಸಿದ್ದಾರೆ. ಅಭ್ಯರ್ಥಿಗಳನ್ನು ಮೊದಲೇ ಸಂಪರ್ಕಿಸಿ ಅವರನ್ನು ಪರೀಕ್ಷೆಯಲ್ಲಿ […]