ಎಡೆಬಿಡದೆ ಸುರಿದ ಮಳೆ, ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿ
ಬೆಂಗಳೂರು,ಜು.10- ರಾಜ್ಯದಲ್ಲಿ ಎಡೆಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಇನ್ನು ತಗ್ಗಿಲ್ಲ. ಹೀಗಾಗಿ ಕಾವೇರಿ, ತುಂಗಭದ್ರಾ, ಕೃಷ್ಣ ಮೊದಲಾದ ಪ್ರಮುಖ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ಪೈಕಿ ಅರ್ಧದಷ್ಟು ಜಲಾಶಯಗಳು ಭರ್ತಿಯ ಹಂತ ತಲುಪಿವೆ. ರಾಜ್ಯದ ಜೀವನಾಡಿ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಶೇ.90ಕ್ಕೂ ಹೆಚ್ಚು ಸಂಗ್ರಹವಾಗಿದೆ. 34 ಸಾವಿರ ಕ್ಯೂಸೆಕ್ಸ್‍ನಷ್ಟು ಒಳಹರಿವಿದ್ದು, 45 ಟಿಎಂಸಿಗೂ ಹೆಚ್ಚು […]