ಕಾಂಗ್ರೆಸ್ ರೌಡಿಗಳ ಪಕ್ಷ, ನಮ್ಮದು ಸುಸಂಸ್ಕೃತರ ಪಕ್ಷ : ಈಶ್ವರಪ್ಪ

ಶಿವಮೊಗ್ಗ,ನ.30- ಕಾಂಗ್ರೆಸ್ ರೌಡಿಗಳ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದವರು ಎಂದು ಕಾಂಗ್ರೆಸ್‍ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ರೌಡಿಶೀಟರ್ ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಲೇವಡಿ ಮಾಡಿದ್ದ ಕಾಂಗ್ರೆಸ್, ಬಿಜೆಪಿ ರೌಡಿಗಳ ಪಕ್ಷ ಎಂದು ಹರಿಹಾಯ್ದಿತ್ತು. ಇದಕ್ಕೆ ಟಾಂಗ್ ನೀಡಿರುವ ಈಶ್ವರಪ್ಪ, ನಮ್ಮದು ರೌಡಿಗಳ ಪಕ್ಷ ಅಲ್ಲ. ಸುಸಂಸ್ಕೃತರ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ತಿಹಾರ್ ಜೈಲಿಗೆ ಹೋಗಿ ಬಂದವರು. ಕಾಂಗ್ರೆಸ್‍ನ ಯುವ ಮೋರ್ಚಾ ಅಧ್ಯಕ್ಷ ನಲಪಾಡ್ ಬಾರ್‍ನಲ್ಲಿ […]

ಸೋನಿಯಾ ಗಾಂಧಿ ಓಲೈಕೆಗೆ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ : ಈಶ್ವರಪ್ಪ

ಮೈಸೂರು,ಸೆ.16- ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆ ವೇಳೆ ಬಿಲ್ ಪ್ರತಿಯನ್ನು ಹರಿದು ಹಾಕಿದ ಕಾಂಗ್ರೆಸ್ ಕ್ರಮವನ್ನು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಖಂಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರನ್ನು ಓಲೈಕೆ ಮಾಡುವ ಸಲುವಾಗಿ ಕಾಂಗ್ರೆಸ್ ಸದಸ್ಯರು ಈ ರೀತಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಜಾರಿ ನಿರ್ದೇಶನಾಲಯ ನೋಟಿಸ್ ನೀಡಿರುವ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗೆ ವ್ಯಂಗ್ಯವಾಡಿರುವ ಅವರು, ಭಾರತ್ ಜೋಡೊ ಯಾತ್ರೆಯ […]

ಸಿದ್ದರಾಮಯ್ಯಗೆ ಈಶ್ವರಪ್ಪ ತಿರುಗೇಟು

ಬೆಂಗಳೂರು,ಆ.19- ಅಧಿಕಾರದ ಆಸೆಗಾಗಿ ಟಿಪ್ಪುಗೆ ಪೂಜೆ ಮಾಡಿದ ತಮಗೆ ಬೇಕಾದಾಗ ಗಲಭೆ ಮಾಡಿಸುವ ಅಭ್ಯಾಸವಿದೆ ಎಂಬ ಸತ್ಯ ಗೊತ್ತಿರುವ ವಿಷಯವೇ ಎಂದು ಮಾಜಿ ಸಚಿವಕೆ.ಎಸ್. ಈಶ್ವರಪ್ಪ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾನ್ಯ ಸಿದ್ದರಾಮಯ್ಯನವರೇ ನನ್ನದು ನಿಮ್ಮಂತೆ ಅಧಿಕಾರಕ್ಕಾಗಿ ವಿಲಿವಿಲಿ ಒದ್ದಾಡುವ ಜಾಯಮಾನವಲ್ಲ. ಕಳ್ಳನ ಮನಸ್ಸು ಹುಳ್ ಹುಳ್ಗೆ ಎಂಬ ಗಾದೆ ಮಾತಿನ ತರ ನಿಮ್ಮ ಮನಸ್ಸಿನಲ್ಲಿರುವುದನ್ನೇ ಹೇಳಿದೀರಿ ಎಂದು ತಿರುಗೇಟು ಕೊಟ್ಟಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಬೆಂಗಳೂರು,ಜು.18- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅರೆ ಅಲೆಮಾರಿಯಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಲು ಅವರಿಗೆ ಇನ್ನು ಯಾವುದೇ ಕ್ಷೇತ್ರ ಸಿಕ್ಕಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯನವರು ಕೊನೆಗೆ ಚಾಮರಾಜಪೇಟೆಗೆ ಬಂದು ನಿಲ್ಲುತ್ತಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಅಮೇಥಿ ಕ್ಷೇತ್ರ ಬಿಟ್ಟು ಕೇರಳದ ವಯನಾಡಿಗೆ ಬಂದರು. ಅದೇ ರೀತಿಯ ದುಸ್ಥಿತಿ ಸಿದ್ದರಾಮಯ್ಯನವರಿಗೂ ಬರಲಿದೆ ಎಂದರು. ಸಿದ್ದರಾಮೋತ್ಸವಕ್ಕೂ ಕಾಂಗ್ರೆಸ್‍ಗೂ ಯಾವುದೇ ಸಂಬಂಧವಿಲ್ಲ […]

ಈಶ್ವರಪ್ಪ ತಲೆದಂಡಕ್ಕೆ ಕಾರಣವಾಗಿದ್ದ ಸಂತೋಷ್ ಆತ್ಮಹತ್ಯೆ ಪ್ರಕರಣ ರಾಜಭವನ ಅಂಗಳದಲ್ಲಿ

ಬೆಂಗಳೂರು,ಜು.15- ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿ ಸಚಿವ ಈಶ್ವರಪ್ಪನವರ ತಲೆದಂಡಕ್ಕೂ ಕಾರಣವಾಗಿದ್ದ ಬೆಳಗಾವಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಇದೀಗ ರಾಜಭವನ ಅಂಗಳಕ್ಕೆ ಕಾಲಿಟ್ಟಿದೆ. ಪ್ರಕರಣ ಕುರಿತಂತೆ ಪೊಲೀಸರಿಂದ ಸರಿಯಾದ ತನಿಖೆ ನಡೆಯುತ್ತಿಲ್ಲ ಎಂದು ಆರೋಪಿ ಸಂತೋಷ್ ಪತ್ನಿ, ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್‍ಗೆ ಪತ್ರ ಬರೆದಿದ್ದು, ನಿಷ್ಪಕ್ಷ ಹಾಗೂ ಪಾರದರ್ಶಕ ತನಿಖೆ ನಡೆಸಬೇಕೆಂದು ಕೋರಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ. ಕೇವಲ 15 ದಿನದಲ್ಲಿ […]