ಮುಸಲ್ಮಾನ್ ಗುಂಡಾಗಳೇ ಹರ್ಷನ ಕೊಲೆ ಮಾಡಿದ್ದ : ಸಚಿವ ಈಶ್ವರಪ್ಪ
ಬೆಂಗಳೂರು,ಫೆ.21-ಶಿವಮೊಗ್ಗದಲ್ಲಿ ಕಳೆದ ರಾತ್ರಿ ಭಜರಂಗದಳದ ಕಾರ್ಯಕರ್ತನ ಕಗ್ಗೊಲೆಯ ಹಿಂದೆ ಮುಸ್ಲಿಂ ಗೂಂಡಾಗಳ ಕೈವಾಡವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೂ ಶಿವಮೊಗ್ಗದಲ್ಲಿ ಎಂದಿಗೂ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಮೊದಲ ಬಾರಿಗೆ ಇಂತಹ ದುರ್ಘಟನೆ ನಡೆದಿದೆ. ಇದರಲ್ಲಿ ಮುಸ್ಲಿಂ ಗೂಂಡಾಗಳ ಕೈವಾಡವಿದೆ ಎಂದು ನೇರವಾಗಿ ಆರೋಪಿಸಿದರು. ( ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಯ ಆರೋಪಿಗಳ ಸುಳಿವು ಪತ್ತೆ..! ) ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆಯಾಗಿದೆ. ಮುಸಲ್ಮಾನ ಗೂಂಡಾಗಳಿಂದಲೇ ಕೊಲೆಯಾಗಿದೆ. ಇದರಲ್ಲಿ […]