ಸಂತೋಷ್ ಆತ್ಮಹತ್ಯೆ ಪ್ರಕರಣ ಮುಚ್ಚಿ ಹಾಕಲು ಸರ್ಕಾರದ ಯತ್ನ: ಸಿದ್ದರಾಮಯ್ಯ

ತುಮಕೂರು,ಜು.22- ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿಹಾಕಿ ಈಶ್ವರಪ್ಪ ಅವರನ್ನು ರಕ್ಷಿಲು ಸರ್ಕಾರ ಯತ್ನಿಸಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಶಿರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್, ಈಶ್ವರಪ್ಪ ಕೆಲಸ ಮಾಡಿಸಿ ಹಣ ಕೊಡುತ್ತಿಲ್ಲ, ಅದಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿರುವ ಡೆತ್ ನೋಟ್ ಮೊಬೈಲ್‍ನಲ್ಲಿ ಪತ್ತೆಯಾಗಿತ್ತು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ನಾವು ಆಗಲೇ ಒತ್ತಾಯಿಸಿದ್ದೆವು. ಆದರೂ ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಲಿಲ್ಲ. ಡೆತ್ ನೋಟ್‍ನಲ್ಲಿ ಹೆಸರಿರುವರಿಗೆ ಬಿ ರಿಪೋರ್ಟ್ ಹಾಕುವ […]