ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಕ್ಷೀರಭಾಗ್ಯ ಹಾಲಿನ ಪೌಡರ್..!

ಬೆಳಗಾವಿ, ನ.19- ಬೆಳಗಾವಿ ಸುವರ್ಣಸೌಧ ಬಳಿಯ ಹಲಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗುರುಸಿದ್ದೇಶ್ವರ ಸ್ವೀಟ್ಸ್ ಅಂಗಡಿ ಮೇಲೆ ದಾಳಿ ನಡೆಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕ್ಷೀರಭಾಗ್ಯ ಯೋಜನೆಯ 32 ಕೆಜಿ ಹಾಲಿನ ಪೌಡರ್ ವಶಪಡಿಸಿಕೊಂಡಿದ್ದಾರೆ. ಬಡವರ ಮಕ್ಕಳಿಗೆ ಪೌಷ್ಠಿಕ ಕೊರತೆ ನಿವಾರಿಸಲು ಸರ್ಕಾರದಿಂದ ಕ್ಷೀರ ಭಾಗ್ಯ ಯೋಜನೆ ಜಾರಿ ಮಾಡಿತ್ತು. ಆದರೆ, ಬಡವರ ಮಕ್ಕಳಿಗೆ ಸೇರಬೇಕಾದ ಹಾಲಿನ ಪೌಡರ್ ಕೆಲವು ಸ್ವೀಟ್ ಮಾರ್ಟ್ ಅಂಗಡಿಗಳಲ್ಲಿ ಕವಾ ಹಾಗೂ ಇನ್ನಿತರ ಪೇಡಗಳನ್ನು […]