ಶೀಘ್ರದಲ್ಲೇ ರಾಜ್ಯದಲ್ಲೂ ಕೊರೋನಾ ಮಾರ್ಗಸೂಚಿ ಬಿಡುಗಡೆ : ಸಚಿವ ಸುಧಾಕರ್

ಬೆಳಗಾವಿ, ಡಿ. 21, ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್ ಪಡೆಯಲು ಆದ್ಯತೆ ನೀಡಬೇಕಿದೆ. ಹೊಸದಾಗಿ […]